ಬೆಂಗಳೂರು : ಚುನಾವಣೆಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿ ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೊರಡಿಸಿರುವ ಆದೇಶಕ್ಕೆ ಮಧ್ಯಂತರ ತಡೆ ನೀಡುವಂತೆ ಕೋರಿ ಹೈಕೋರ್ಟ್ಗೆ ಪ್ರಜ್ವಲ್ ರೇವಣ್ಣ ಮನವಿ ಸಲ್ಲಿಸಿದ್ದಾರೆ.
ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ವರೆಗೂ, ಪಿಎಂ ಸ್ಥಾನದಿಂದ ಅಸಿಂಧು ಆದೇಶಕ್ಕೆ ಮಧ್ಯಂತರ ತಡೆ ನೀಡುವಂತೆ ಕೋರಿ ಹೈಕೋರ್ಟ್ಗೆ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ.
ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಒದಗಿಸಿದ್ದ ಆರೋಪಗಳು ಸಾಬೀತಾಗಿರುವ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಸದಸ್ಯ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ತೀರ್ಪು ನೀಡಿತ್ತು.
ಲೋಕಸಭೆಗೆ 2019ರ ಏಪ್ರಿಲ್ 18 ರಂದು ಚುನಾವಣೆ ನಡೆಯಿತು. ಮೇ 23 ರಂದು ಫಲಿತಾಂಶ ಪ್ರಕಟವಾಗಿತ್ತು. ಪ್ರಜ್ವಲ್ ರೇವಣ್ಣ ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಪ್ರಜ್ವಲ್ ರೇವಣ್ಣ ಗೆಲುವಿನ ಬಗ್ಗೆ ಬಿಜೆಪಿಗೆ ಸೇರಿದ್ದ ಜಿ.ದೇವರಾಜೇಗೌಡ 2019 ರಲ್ಲಿ ಪ್ರತ್ಯೇಕ ಚುನಾವಣಾ ತಕರಾರು ಅರ್ಜಿಗಳನ್ನು ಸಲ್ಲಿಸಿದ್ದರು.