ಹಾಸನ: ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭಗೊಂಡಿದ್ದು ಇಂದು ಹಾಸನ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸಿದ್ದಾರೆ.
 
									
			
			 
 			
 
 			
					
			        							
								
																	ಜಿಲ್ಲಾ ಚುನಾವಣಾಧಿಕಾರಿ ಸಿ.ಸತ್ಯಭಾಮಗೆ ಪ್ರಜ್ವಲ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಶಾಸಕರಾದ ಹೆಚ್‌ಡಿ ರೇವಣ್ಣ, ಎ.ಮಂಜು, ಹೆಚ್‌ಪಿ ಸ್ವರೂಪ್ ಪ್ರಕಾಶ್, ಸಿಎನ್ ಬಾಲಕೃಷ್ಣ ಇದ್ದರು.
									
										
								
																	ನಾಮಪತ್ರ ಸಲ್ಲಿಕೆ ಮುನ್ನಾ ಪ್ರಜ್ವಲ್ ರೇವಣ್ಣ ಅವರು ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮಾವಿನಕೆರೆಯಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಾಲಯದಲ್ಲಿ ನಾಮಪತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದರು.
									
											
							                     
							
							
			        							
								
																	ಎಚ್‌ಡಿ ದೇವೇಗೌಡರ ಆಶೀರ್ವಾದ ಪಡೆದ ಪ್ರಜ್ವಲ್:  ನಾಮಪತ್ರ ಸಲ್ಲಿಕೆಗೂ ಮುನ್ನ ಹುಟ್ಟೂರು ಹರದನಹಳ್ಳಿಯಲ್ಲಿರುವ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಆಶೀರ್ವಾದ ಪಡೆದಿದರು.  ಸೂಚಕರಾಗಿ ನಾಮಪತ್ರಕ್ಕೆ ಸಹಿ ಮಾಡಿ ಹೆಚ್‌ಡಿ ಮೊಮ್ಮಗನಿಗೆ ಹಾರೈಸಿದ್ದಾರೆ.
									
			                     
							
							
			        							
								
																	ವಿಶೇಷ ಎಂದರೆ ಮಗನ ನಾಮಪತ್ರ ಸಲ್ಲಿಕೆ ಹಿನ್ನೆಲೆ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಅವರು ಬರಿಗಾಲಿನಲ್ಲೇ  ಚುನಾವಣಾಧಿಕಾರಿಗಳ ಕಾರ್ಯಾಲಯಕ್ಕೆ ತೆರಳಿ ಮಗನ ನಾಮಪತ್ರ ಸಲ್ಲಿಕೆ ಕಾರ್ಯದಲ್ಲಿ ಭಾಗಿಯಾಗಿದರು.