ಅಜ್ಜನ ಆಶೀರ್ವಾದ ಪಡೆದು ನಾಮಪತ್ರ ಸಲ್ಲಿಸಿದ ಪ್ರಜ್ವಲ್ ರೇವಣ್ಣ

Sampriya
ಗುರುವಾರ, 28 ಮಾರ್ಚ್ 2024 (13:54 IST)
Photo Courtesy X
ಹಾಸನ: ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭಗೊಂಡಿದ್ದು ಇಂದು ಹಾಸನ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸಿದ್ದಾರೆ.

ಜಿಲ್ಲಾ ಚುನಾವಣಾಧಿಕಾರಿ ಸಿ.ಸತ್ಯಭಾಮಗೆ ಪ್ರಜ್ವಲ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಶಾಸಕರಾದ ಹೆಚ್‌ಡಿ ರೇವಣ್ಣ, ಎ.ಮಂಜು, ಹೆಚ್‌ಪಿ ಸ್ವರೂಪ್ ಪ್ರಕಾಶ್, ಸಿಎನ್ ಬಾಲಕೃಷ್ಣ ಇದ್ದರು.

ನಾಮಪತ್ರ ಸಲ್ಲಿಕೆ ಮುನ್ನಾ ಪ್ರಜ್ವಲ್ ರೇವಣ್ಣ ಅವರು ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮಾವಿನಕೆರೆಯಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಾಲಯದಲ್ಲಿ ನಾಮಪತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದರು.

ಎಚ್‌ಡಿ ದೇವೇಗೌಡರ ಆಶೀರ್ವಾದ ಪಡೆದ ಪ್ರಜ್ವಲ್:  ನಾಮಪತ್ರ ಸಲ್ಲಿಕೆಗೂ ಮುನ್ನ ಹುಟ್ಟೂರು ಹರದನಹಳ್ಳಿಯಲ್ಲಿರುವ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಆಶೀರ್ವಾದ ಪಡೆದಿದರು.  ಸೂಚಕರಾಗಿ ನಾಮಪತ್ರಕ್ಕೆ ಸಹಿ ಮಾಡಿ ಹೆಚ್‌ಡಿ ಮೊಮ್ಮಗನಿಗೆ ಹಾರೈಸಿದ್ದಾರೆ.

ವಿಶೇಷ ಎಂದರೆ ಮಗನ ನಾಮಪತ್ರ ಸಲ್ಲಿಕೆ ಹಿನ್ನೆಲೆ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಅವರು ಬರಿಗಾಲಿನಲ್ಲೇ  ಚುನಾವಣಾಧಿಕಾರಿಗಳ ಕಾರ್ಯಾಲಯಕ್ಕೆ ತೆರಳಿ ಮಗನ ನಾಮಪತ್ರ ಸಲ್ಲಿಕೆ ಕಾರ್ಯದಲ್ಲಿ ಭಾಗಿಯಾಗಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments