ಇಂದು ಜರ್ಮನಿಯಿಂದ ಪ್ರಜ್ವಲ್ ರೇವಣ್ಣ ವಾಪಸ್

Krishnaveni K
ಶುಕ್ರವಾರ, 3 ಮೇ 2024 (09:16 IST)
ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದು ವಿದೇಶದಿಂದ ವಾಪಸ್ಸಾಗುವ ಸಾಧ‍್ಯತೆಯಿದೆ.

ಏಪ್ರಿಲ್ 27 ರಂದು ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದರು. ಇದರ ಬೆನ್ನಲ್ಲೇ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣವೂ ಬೆಳಕಿಗೆ ಬಂದಿತ್ತು. ಇದರ ಸುಳಿವು ಸಿಕ್ಕಿಯೇ ಅವರು ಜರ್ಮನಿಗೆ ತೆರಳಿ ತಲೆಮರೆಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸುತ್ತಲೇ ಇದೆ.

ಇದರ ನಡುವೆ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ಒಪ್ಪಿಸಿದ್ದು, ಪ್ರಜ್ವಲ್ ಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ. ಅವರ ತಂದೆ ಶಾಸಕ ಎಚ್ ಡಿ ರೇವಣ್ಣ ಕೂಡಾ ಪ್ರಕರಣದಲ್ಲಿ ಆರೋಪಿಯಾಗಿದ್ದು, ಅವರಿಗೂ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ. ಆದರೆ ಇದುವರೆಗೆ ತಂದೆ-ಮಗ ಇಬ್ಬರೂ ವಿಚಾರಣೆಗೆ ಹಾಜರಾಗಿಲ್ಲ.

ಈ ನಡುವೆ ಪ್ರಜ್ವಲ್ ಮೇ 3 ರಂದು ವಿದೇಶದಿಂದ ವಾಪಸ್ಸಾಗಲಿದ್ದಾರೆ ಎಂಬ ಮಾಹಿತಿಯಿತ್ತು. ಇಂದು ಮಧ್ಯರಾತ್ರಿ ಪ್ರಜ್ವಲ್ ಬೆಂಗಳೂರಿಗೆ ಬಂದಿಳಿಯಲಿದ್ದಾರೆ ಎಂಬ ಮಾಹಿತಿಯಿದೆ. ಹಾಗಿದ್ದರೂ ಅವರು ವಿಚಾರಣೆಗೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ಕೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ದಿಢೀರನೇ ತುಮಕೂರು ಪ್ರವಾಸವನ್ನು ರದ್ದು ಮಾಡಿದ ಸಿಎಂ, ಇದೇ ಕಾರಣ

ಮುಂದಿನ ಸುದ್ದಿ