Publish Date: Wed, 11 Oct 2017 (18:32 IST)
Updated Date: Wed, 11 Oct 2017 (18:35 IST)
ಜೆಡಿಎಸ್ ಪಕ್ಷದಲ್ಲಿ ಸೂಟ್‌ಕೇಸ್ ಸಂಸ್ಕ್ರತಿಯಿದೆ ಎಂದು ಹೇಳಿಕೆ ನೀಡಿ ವಿವಾದಕ್ಕೊಳಗಾಗಿದ್ದ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ, ಇಂದು ಪಕ್ಷದ ಕೆಲ ನಾಯಕರನ್ನು ಬಕೆಟ್‌ಗಳು ಎಂದು ಹೇಳಿ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ರಾಜರಾಜೇಶ್ವರಿ ನಗರದಲ್ಲಿ ಪಕ್ಷದ ಕಾರ್ಯಕರ್ತರು ಆಯೋಜಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾನು ಬೆಳೆದರೆ ಕೆಲವರಿಗೆ ಅಡ್ಡಿಯಾಗುತ್ತೇನೆ ಎನ್ನುವ ಕಾರಣದಿಂದ ನನ್ನ ಹೇಳಿಕೆಗಳನ್ನು ತಿರುಚಿ ವಿವಾದ ಸೃಷ್ಟಿಸಲಾಗಿತ್ತು ಎಂದು ತಿಳಿಸಿದ್ದಾರೆ.
ನಾನು ಇವರೆಗೂ ಬಿದ್ದಿಲ್ಲ, ಬೀಳುವುದು ಇಲ್ಲ. ನಾನು ಬೆಳೆದರೆ ಅವರ ಕಳ್ಳಾಟ ತಡೆಯುತ್ತೇನೆ ಎನ್ನುವ ಆತಂಕದಿಂದ ನನ್ನ ರಾಜಕೀಯ ಪ್ರವೇಶಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದೇನೆ. ಹಿರಿಯರ ಆಶೀರ್ವಾದ ಪಡೆದೇ ಸ್ಪರ್ಧಿಸುತ್ತೇನೆ ಎಂದು ಪ್ರಜ್ವಲ್ ರೇವಣ್ಣ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.