Select Your Language

Notifications

webdunia
webdunia
webdunia
webdunia

ಬೆಂಗಳೂರಿಗೆ ಬಂದಿಳಿಯುತ್ತಿದ್ದ ಹಾಗೇ ಪ್ರಜ್ವಲ್‌ ಎಸ್‌ಐಟಿ ವಶಕ್ಕೆ: ಜಿ ಪರಮೇಶ್ವರ

G.Parameshwar

sampriya

ಬೆಂಗಳೂರು , ಬುಧವಾರ, 29 ಮೇ 2024 (17:34 IST)
Photo By X
ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬೇಕಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದ ಹಾಗೇ ಅವರನ್ನು ಏರ್‌ಪೋರ್ಟ್‌ನಲ್ಲಿ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಬುಧವಾರ ಹೇಳಿದ್ದಾರೆ.

ಈಚೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಜ್ವಲ್‌ ರೇವಣ್ಣ ಅವರು ವಿಡಿಯೋ ಹಂಚಿಕೊಂಡು ಇದೇ 31 ರಂದು ತಾನು ಬೆಂಗಳೂರಿಗೆ ವಾಪಾಸ್ಸಾಗುವುದಾಗಿ ವಿಡಿಯೋ ಹೇಳಿಕೆ ನೀಡಿದ್ದರು.

ಅಧಿಕೃತ ಮೂಲಗಳ ಪ್ರಕಾರ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇ 30 ರಂದು ಮ್ಯೂನಿಚ್‌ನಿಂದ ಬೆಂಗಳೂರಿಗೆ ಹಿಂತಿರುಗಲು ವಿಮಾನ ಟಿಕೆಟ್ ಕಾಯ್ದಿರಿಸಿದ್ದಾರೆ ಮತ್ತು ಮೇ 31ರಂದು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ನಿರೀಕ್ಷೆಯಿದೆ.

ಈ ಕುರಿತು ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ಪ್ರಜ್ವಲ್ ವಿರುದ್ಧ ವಾರೆಂಟ್ ಜಾರಿಯಾಗಿರುವುದರಿಂದ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಎಸ್‌ಐಟಿ ಕಾಯುತ್ತಿದೆ. ಆತನನ್ನು ಬಂಧಿಸಿ ಹೇಳಿಕೆ ಪಡೆಯಲಿದ್ದಾರೆ(ಎಸ್‌ಐಟಿ) ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಸುಧಾಕರ್‌ಗೆ ಒಂದು ಮತ ಜಾಸ್ತಿ ಬಂದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡ್ತೇನೆ: ಪ್ರದೀಪ್‌ ಈಶ್ವರ್