ಕ್ಷಮೆಗೆ ಅರ್ಹರಲ್ಲದ ಪ್ರಜ್ವಲ್‌ಗೆ ಕಠಿಣ ಶಿಕ್ಷೆಯಾಗಲಿ: ಪ್ರಹ್ಲಾದ್‌ ಜೋಶಿ

sampriya
ಶನಿವಾರ, 1 ಜೂನ್ 2024 (18:46 IST)
Photo By X
ಹುಬ್ಬಳ್ಳಿ: ಹಲವು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಎಸ್‌ಐಟಿ ವಶದಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ ಅವರು ಕ್ಷಮೆಗೆ ಅರ್ಹರಲ್ಲ, ಅವರು ಮಾಡಿದ ತಪ್ಪಿಗೆ ಕಠಿಣ ಶಿಕ್ಷೆಯಾಗಬೇಕು  ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶನಿವಾರ ಒತ್ತಾಯಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಬಂಧನಕ್ಕೂ ಮುನ್ನಾ ಬಿಡುಗಡೆ ಮಾಡಿದ್ದ ವಿಡಿಯೋದಲ್ಲಿ ಅವರ ಕುಟುಂಬ ಹಾಗೂ ರಾಜ್ಯದ ಜನರಲ್ಲಿ ಕ್ಷಮೆಯಾಚಿಸಿದ್ದರು.

ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆಯಲ್ಲಿ ಪ್ರಜ್ವಲ್ ರೇವಣ್ಣ ಕ್ಷಮೆಯಾಚಿಸುತ್ತಿರುವ ಹಿಂದಿನ ಕಾರಣ ಗೊತ್ತಿಲ್ಲ. ಆದರೆ, ಅವರು ಕ್ಷಮೆಗೆ ಅರ್ಹರಲ್ಲ ಎಂದು ಕಟುವಾಗಿ ಮಾತನಾಡಿದರು.

ನಮ್ಮ ದೇಶದಲ್ಲಿ ಮಹಿಳೆಯರಿಗೆ ತುಂಬಾನೇ ಗೌರವವನ್ನು ನೀಡುತ್ತೇವೆ. ಆದರೆ ಪ್ರಜ್ವಲ್‌ ರೇವಣ್ಣ ಮಹಿಳೆಯರ ಜತೆ ನಡೆದುಕೊಂಡ ರೀತಿ ಅಸಹ್ಯವಾಗಿದೆ. ಆತ ರಾಜ್ಯದ ಜನತೆ ಬಳಿ ಕ್ಷಮೆಯಾಚಿಸಿದರು ಕ್ಷಮೆಗೆ ಅರ್ಹರಲ್ಲ. ಅವರು ಮಾಡಿದ ತಪ್ಪಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆಯಾಗಲಿ ಎಂದರು.

ಇದು ಬಿಜೆಪಿಯ ಸ್ಪಷ್ಟ ನಿಲುವು ಎಂದು ಜೋಶಿ ಒತ್ತಿ ಹೇಳಿದರು. ಭಾರತದ ನ್ಯಾಯಾಂಗ ವ್ಯವಸ್ಥೆಯು ಶಕ್ತಿಯುತವಾಗಿದೆ ಮತ್ತು ತನಿಖೆಯನ್ನು ತ್ವರಿತವಾಗಿ ನಡೆಸಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ