Publish Date: Wed, 14 Mar 2018 (11:49 IST)
Updated Date: Wed, 14 Mar 2018 (11:51 IST)
ಮಂಗಳೂರು: ಇತ್ತೀಚೆಗೆ ಕೇಂದ್ರ ಸರ್ಕಾರ ಮತ್ತು ಬಲಪಂಥೀಯರ ವಿರುದ್ಧ ಕಿಡಿ ಕಾರುತ್ತಿರುವ ಬಹುಭಾಷಾ ನಟ ಪ್ರಕಾಶ್ ರೈ ತಮಗೆ ರಾಜ್ಯದಲ್ಲಿ ಆತಂಕದ ವಾತಾವರಣವಿದೆ ಎಂದಿದ್ದಾರೆ.
ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು ಮಂಗಳೂರು ವಿಮಾನ ನಿಲ್ದಾಣದ ಬಳಿ ತಮ್ಮ ಕಾರಿನ ಡ್ರೈವರ್ ಬಳಿ ಬಂದ ಆಗಂತಕರು ನನ್ನ ಬಗ್ಗೆ ವಿಚಾರಿಸಿದ್ದಾರೆ. ನಾನು ಎಲ್ಲಿ ಉಳಿದುಕೊಂಡಿದ್ದೇನೆ ಎಂದೆಲ್ಲಾ ವಿವರಣೆ ಕೇಳಿ ಡ್ರೈವರ್ ಗೆ ಧಮಕಿ ಹಾಕಿದ್ದಾರೆ. ನನಗೆ ರಾಜ್ಯದಲ್ಲಿ ಜೀವ ಬೆದರಿಕೆ ಇದೆ ಎಂದು ಪ್ರಕಾಶ್ ರೈ ಹೇಳಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ