Select Your Language

Notifications

webdunia
webdunia
webdunia
webdunia

ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೆ ಒಳಪಡಿಸಲು ಪ್ರಲ್ಹಾದ ಜೋಶಿ ಒತ್ತಾಯ

ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೆ ಒಳಪಡಿಸಲು ಪ್ರಲ್ಹಾದ ಜೋಶಿ ಒತ್ತಾಯ

Sampriya

ನವದೆಹಲಿ , ಶುಕ್ರವಾರ, 20 ಸೆಪ್ಟಂಬರ್ 2024 (15:09 IST)
Photo Courtesy X
ನವದೆಹಲಿ: ತಿರುಪತಿ ಪ್ರಕರಣದ ಬೆನ್ನಲ್ಲೇ ರಾಜ್ಯದ ಎಲ್ಲಾ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೆ ಒಳಪಡಿಸಲು ರಾಜ್ಯ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ.

ಆಂಧ್ರಪ್ರದೇಶ ಪ್ರಕರಣದಿಂದ ಕರ್ನಾಟಕ ಸಹ ಎಚ್ಚೆತ್ತುಕೊಳ್ಳಬೇಕು. ಎಲ್ಲಾ ಪವಿತ್ರ ಕ್ಷೇತ್ರಗಳ ಪ್ರಸಾದಗಳನ್ನ ತ್ವರಿತವಾಗಿ ಪರೀಕ್ಷೆಗೆ ಒಳಪಡಿಸಬೇಕು ಎಂದು ಸಚಿವ ಜೋಶಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ತಿರುಪತಿಯಲ್ಲಿ ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಬಳಸಿದ ಕಾರಣ ರಾಜ್ಯದಲ್ಲಿನ ಪವಿತ್ರ ಕ್ಷೇತ್ರಗಳ ಪ್ರಸಾದವನ್ನು ತಕ್ಷಣ ಪರೀಕ್ಷೆಗೆ ಒಳಪಡಿಸುವುದು ಒಳಿತು ಎಂದು ಅವರು ಹೇಳಿದರು.

ತಿರುಪತಿಯಲ್ಲಿ ಪ್ರಸಾದಕ್ಕೆ ಜಾನುವಾರುಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಬಳಸುತ್ತಿದ್ದರು ಎಂಬ ಸಂಗತಿ ಹಿಂದೂ ಸಮಾಜವನ್ನು ಚಿಂತೆಗೀಡು ಮಾಡಿದೆ ಎಂದು ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಅಧಿಕಾರ ಅವಧಿಯಲ್ಲಿ ಈ ರೀತಿ ಹಲವು ಹಿಂದೂ ವಿರೋಧಿ ಕ್ರಮಗಳಿಗೆ ಬೆಂಬಲವಾಗಿ ನಿಂತಿರುವುದು ಅಕ್ಷಮ್ಯ. ಅಷ್ಟೇ ಅಲ್ಲ, ತಿರುಮಲ ತಿರುಪತಿಯ ಟ್ರಸ್ಟ್ ನಲ್ಲಿ ಜಗನ್ ರೆಡ್ಡಿ ಅವರು ಹಿಂದೂಯೇತರರನ್ನೂ ಟ್ರಸ್ಟ್ ಸದಸ್ಯರನ್ನಾಗಿ ಮಾಡಿದ್ದರು ಎಂದು ಜೋಶಿ ಆರೋಪಿಸಿದ್ದಾರೆ.

ಆಂಧ್ರಪ್ರದೇಶದಲ್ಲಿ ಮತ್ತೆ ಈ ರೀತಿಯ ವಿಚಾರಗಳು ಮರುಕಳಿಸಬಾರದು. ಆ ನಿಟ್ಟಿನಲ್ಲಿ ನೂತನ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಸದಾ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ನಾಯಕರ ಪ್ರಚೋದನೆಯಿಂದಲೇ ಕೋಮುಗಲಭೆ: ಸಿದ್ದರಾಮಯ್ಯ ಆರೋಪ