Select Your Language

Notifications

webdunia
webdunia
webdunia
webdunia

ಜಿಎಸ್ ಟಿ ನೋಟಿಸ್ ಕೊಡ್ತಿರೋದು ಕೇಂದ್ರವಲ್ಲ ರಾಜ್ಯ ಸರ್ಕಾರ: ಪ್ರಲ್ಹಾದ್ ಜೋಶಿ

Pralhad Joshi

Krishnaveni K

ಬೆಂಗಳೂರು , ಬುಧವಾರ, 23 ಜುಲೈ 2025 (11:10 IST)
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್ ಕೊಟ್ಟು, ಇದೀಗ ರಾಜ್ಯ ಸರ್ಕಾರಕ್ಕೂ ಹಾಗೂ ಜಿ ಎಸ್ ಟಿ ನೋಟಿಸ್ ಗೂ ಯಾವುದೇ ಸಂಬಂಧವಿಲ್ಲ ಅಂತ ಹೇಳುತ್ತಿರೋದು ನಿಜಕ್ಕೂ ಹಾಸ್ಯಾಸ್ಪದ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

ರಾಜ್ಯದಲ್ಲಿ ವರ್ತಕರಿಗೆ ಜಿಎಸ್ ಟಿ ನೋಟಿಸ್ ವಿವಾದ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಿಎಂ ಹಾಗೂ ಡಿಸಿಎಂ ಇದಕ್ಕೆ ಕೇಂದ್ರ ಸರ್ಕಾರ ಕಾರಣ ಎಂದಿದ್ದರು. ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಲ್ಹಾದ್ ಜೋಶಿ ಇದು ರಾಜ್ಯ ಸರ್ಕಾರದ ಕೆಲಸ. ಕೇಂದ್ರ ಸರ್ಕಾರದ್ದಾಗಿದ್ದರೆ ಬೇರೆ ರಾಜ್ಯಗಳಲ್ಲೂ ಇದೇ ಸಮಸ್ಯೆಯಾಗಬೇಕಿತ್ತು. ಕರ್ನಾಟಕದಲ್ಲಿ ಮಾತ್ರ ಯಾಕಾಗುತ್ತಿದೆ ಎಂದು ಪ್ರಶ್ನೆ ಮಾಡಿದ್ದಾರೆ.

‘GST ನಲ್ಲಿ ಕೇಂದ್ರ ಸರ್ಕಾರದ ಅಡಿಯಲ್ಲಿ #CGST ಮತ್ತು ರಾಜ್ಯ ಸರ್ಕಾರಗಳ‌ ಅಡಿಯಲ್ಲಿ #SGST ಎರಡು ಭಾಗಗಳಿದೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ. ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ.

ಜಿ ಎಸ್ ಟಿ‌ ಕೌನ್ಸಿಲ್ ನಲ್ಲಿ ಯಾವುದೇ ತೀರ್ಮಾನ‌ ತಗೆದುಕೊಳ್ಳಲು ಮಹತ್ವದ ಪಾತ್ರ ವಹಿಸಿರುವುದು ರಾಜ್ಯ ಸರ್ಕಾರಗಳು. ಕೇಂದ್ರ ಸರ್ಕಾರಕ್ಕೆ ಕೇವಲ 3 ನೇ ಒಂದು ಭಾಗ ಮಾತ್ರ ಅಧಿಕಾರವಿದೆ. ಉಳಿದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿದೆ. 3ನೇ ಎರಡು ಭಾಗದಷ್ಟು ಅಧಿಕಾರ ಹೊಂದಿರುವ ರಾಜ್ಯ ‌ಸರ್ಕಾರಗಳ ನಿರ್ಣಯವೇ ಅಂತಿಮವಾಗಿರಲಿದೆ.

ಇದೀಗ ಹಣ್ಣು, ಹಾಲು, ತರಕಾರಿ ಸೇರಿದಂತೆ ದಿನನಿತ್ಯದ ಅಗತ್ಯ ಸರಕು ಸೇವಾ ವ್ಯಾಪಾರಿಗಳಿಗೆ ನೋಟಿಸ್ ನೀಡಿ‌, ಅವರಿಗೆ ತೊಂದರೆ ಕೊಡುತ್ತಿದ್ದಾರೆ. ಬೇರೆ ಯಾವುದೇ ರಾಜ್ಯಗಳಲ್ಲಿ ನೀಡದ ನೋಟಿಸ್, ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿದೆ.

ಯುಪಿಐ ಟ್ರಾನ್ಸಾಕ್ಷನ್ ಇದೀಗ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಡಿಜಿಟಲ್ ಟ್ರಾನ್ಸಾಕ್ಷನ್ ಹದಗೆಡಿಸುವ ದುಸಾಹಸಕ್ಕೆ ಕಾಂಗ್ರೆಸ್ ಸರ್ಕಾರ ಕೈಹಾಕಿರುವುದು ನಿಜಕ್ಕೂ ದುರಂತ ಎಂದು ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಜೀವನಾಂಶವಾಗಿ ಕೋಟಿ ಹಣ, ಕಾರು, ಮನೆ ಕೇಳಿದ ಪತ್ನಿ: ನೀವೇ ದುಡಿಯಕ್ಕಾಗಲ್ವಾ ಎಂದ ಕೋರ್ಟ್