ಪ್ರತಾಪ್ ಸಿಂಹಗೆ ಟಿಕೆಟ್ ಕೈತಪ್ಪಲ್ಲ: ಪ್ರಹ್ಲಾದ್ ಜೋಶಿ ಸ್ಪಷ್ಟನೆ

Krishnaveni K
ಭಾನುವಾರ, 10 ಮಾರ್ಚ್ 2024 (13:10 IST)
ಹುಬ್ಬಳ್ಳಿ: ಸಂಸದ ಪ್ರತಾಪ್ ಸಿಂಹಗೆ ಈ ಬಾರಿ ಮೈಸೂರಿನಿಂದ ಟಿಕೆಟ್ ಕೈ ತಪ್ಪುವ ಸಾಧ‍್ಯತೆಗಳಿವೆ ಎಂಬ ವರದಿಗಳ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನಿಂದ ಈ ಬಾರಿ ಹಾಲಿ ಸಂಸದ ಪ್ರತಾಪ್ ಸಿಂಹ ಬದಲಾಗಿ ರಾಜವಂಶಸ್ಥ ಯದುವೀರ್ ಒಡೆಯರ್ ಗೆ ಟಿಕೆಟ್ ನೀಡಲಾಗುವುದು ಎಂಬ ಸುದ್ದಿ ಜೋರಾಗಿ ಹರಿದಾಡುತ್ತಿದೆ. ರಾಜ್ಯ ಬಿಜೆಪಿ ನಾಯಕರೇ ಪ್ರತಾಪ್ ಸಿಂಹಗೆ ಟಿಕೆಟ್ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂಬ ವದಂತಿಗಳಿತ್ತು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಹ್ಲಾದ್ ಜೋಶಿ ಇದೆಲ್ಲಾ ಊಹಾಪೋಹ ಎಂದಿದ್ದಾರೆ. ಎರಡು ಬಾರಿ ಗೆದ್ದವರಿಗೂ ಟಿಕೆಟ್ ನೀಡಲಾಗಿದೆ. ಎಂಟು ಬಾರಿ ಗೆದ್ದವರಿಗೂ ಟಿಕೆಟ್ ನೀಡಲಾಗಿದೆ. ಪ್ರತಾಪ್ ಸಿಂಹಗೆ ಟಿಕೆಟ್ ಕೈತಪ್ಪುತ್ತದೆ ಎನ್ನುವುದು ಊಹಾಪೋಹ ಎಂದಿದ್ದಾರೆ.

ಎರಡು ಮೂರು ದಿನದಲ್ಲಿ ಟಿಕೆಟ್ ಹಂಚಿಕೆ ಫೈನಲ್ ಆಗಬಹುದು ಎಂದೂ ಅವರು ಹೇಳಿದ್ದಾರೆ. ಕಾಂಗ್ರೆಸ್ ಈಗಾಗಲೇ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಲ್ಲ. ಟಿಕೆಟ್ ಕೈ ತಪ್ಪಿದವರಿಗೆ ಸಮಾಧಾನ ಮಾಡುವ ಕೆಲಸ ಹೈಕಮಾಂಡ್ ಮಾಡಲಿದೆ ಎಂದೂ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments