ಬೆಂಗಳೂರು: ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆಯ ಪೇದೆ ಪತ್ನಿಗೆ ಕಿರುಕುಳ ನೀಡಿದ್ದಕ್ಕೆ ಯುವಕನನ್ನು ವಿಚಾರಣೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಪ್ರಮೋದ್ ಮಧ್ವರಾಜ್ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ.
ಪೇದೆಯ ಪತ್ನಿಗೆ ಕಿರುಕುಳ ನೀಡಿದ್ದ ಯುವಕ ಶಾಸಕ ಪ್ರಮೋದ್ ಆಪ್ತ. ಹೀಗಾಗಿ ಈತನನ್ನು ವಿಚಾರಣೆ ನಡೆಸಿದ್ದಕ್ಕೆ ಪೇದೆಯನ್ನು ಅಮಾನತುಗೊಳಿಸಲಾಗಿತ್ತು. ಇದಕ್ಕೆ ಶಾಸಕ ಪ್ರಮೋದ್ ಮಧ್ವರಾಜ್ ಬೆಂಬಲವಿತ್ತು ಎಂದು ಆರೋಪಿಸಲಾಗಿತ್ತು.
ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಶಾಸಕರು ಘಟನೆ ವಿವರ ನೀಡಿದ್ದಾರೆ. ಬೆಂಗಳೂರಿನ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಶಾಸಕರ ನಡುವೆ ಮಾತುಕತೆ ನಡೆದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ