Select Your Language

Notifications

webdunia
webdunia
webdunia
webdunia

ಮಾತನಾಡುತ್ತಲೇ ಹಾರಿ ಹೋಯ್ತು ಪ್ರಾಣ

ಮಾತನಾಡುತ್ತಲೇ ಹಾರಿ ಹೋಯ್ತು ಪ್ರಾಣ
ಹೊಳೆನರಸೀಪುರ , ಬುಧವಾರ, 15 ಮಾರ್ಚ್ 2023 (16:58 IST)
ಮೊಬೈಲ್​​​ನಲ್ಲಿ ಮಾತನಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ. ಹೊಳೆನರಸೀಪುರದ ಕಾರ್ಯಾಲಯ ಬಡಾವಣೆಯ ನಿವಾಸಿ ವೀರೂಪಾಕ್ಷ ಸಾವನ್ನಪ್ಪಿದ ವ್ಯಕ್ತಿ. ಹಾಸನ ಜಿಲ್ಲೆ, ಹೊಳೆನರಸೀಪುರ ಪಟ್ಟಣದ ಅರಣ್ಯ ಕಚೇರಿ ಬಳಿ ಈ ಘಟನೆ ನಡೆದಿದ್ದು, ಘಟನೆಯ ಎಲ್ಲಾ ದೃಶ್ಯಗಳು ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವೀರೂಪಾಕ್ಷ ಅಂಗಡಿಯ ಮುಂಭಾಗದಲ್ಲಿ ಕುಳಿತು ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ. ಈ ವೇಳೆ ಹಠಾತ್‌ ಹೃದಯಾಘಾತವಾಗಿದೆ. ನೋಡ ನೋಡುತ್ತಿದ್ದಂತೆ ವೀರೂಪಾಕ್ಷ ಕುಸಿದು ಬಿದ್ದಿದ್ದಾನೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಶ್ಮೀರದಲ್ಲಿ NIA ದಾಳಿ