Select Your Language

Notifications

webdunia
webdunia
webdunia
webdunia

ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಪ್ರಕರಣ; ಆಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವರು

ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಪ್ರಕರಣ; ಆಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವರು
ಮೈಸೂರು , ಸೋಮವಾರ, 17 ಡಿಸೆಂಬರ್ 2018 (14:58 IST)
ಮೈಸೂರು : ಚಾಮರಾಜನಗರದ ಸುಳ್ವಾಡಿ ಮಾರಮ್ಮ ದೇಗುಲದ ವಿಷ ಪ್ರಸಾದ ದುರಂತಕ್ಕೆ ಸಂಬಂಧಿಸಿದಂತೆ ಘಟನೆಯ ಬಗ್ಗೆ ಉಡಾಫೆ ಉತ್ತರ ನೀಡಿದ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಇದೀಗ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.


ಆರೋಗ್ಯ ಸಚಿವ ಶಿವಾನಂದ ಪಾಟೀಲ್ ವಿಷ ಪ್ರಸಾದ ಸೇವಿಸಿ ಅಸ್ವಸ್ಥರಾದವರನ್ನು  ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮದವರ ಮುಂದೆ ‘ವಿಷ ಪ್ರಸಾದ ಘಟನೆ ಬಗ್ಗೆ ನನಗೆ ತಡವಾಗಿ ಗೋತ್ತಾಯ್ತು’ ಎಂದು  ಉಡಾಫೆ ಹೇಳಿಕೆ ಕೊಟ್ಟಿದ್ದರು. ಈ ಬಗ್ಗೆ ಬಾರೀ ವಿರೋಧ ವ್ಯಕ್ತವಾಗಿತ್ತು.


ಇದೀಗ  ಈ ಕುರಿತು ಸ್ಪಷ್ಟನೆ ನೀಡಿದ ಅವರು ,’ ನಾನು ಬಾಯಿ ತಪ್ಪಿ ನಿನ್ನೆ ಸಂಜೆ ನನಗೆ ವಿಷಯ ಗೊತ್ತಾಯ್ತು ಎಂದು ಹೇಳಿಕೆ ನೀಡಿದ್ದೆ, ನಂತರ ಅದನ್ನು ಸರಿಪಡಿಸಿಕೊಂಡೆ ವಿಷಯ ತಿಳಿದ ಕೂಡಲೇ ನಾನು ನನ್ನ ಇಲಾಖೆಯಿಂದ ಎಲ್ಲಾ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಪ್ರಾಥಮಿಕ, ತಾಲೂಕು ಆಸ್ಪತ್ರೆಗಳಲ್ಲಿರುವ ವೈದ್ಯರ ಕೊರತೆ ನೀಗಿಸಲು ಸರಕಾರ ಕ್ರಮವಹಿಸಿದ್ದು, ಕೆ.ಆರ್‌.ಆಸ್ಪತ್ರೆ ಮತ್ತು ಚಾಮರಾಜನಗರ ಜಿಲ್ಲಾ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸಲಾಗುವುದು’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಪ್ರಕರಣ; ಮೃತರ ಸಂಖ್ಯೆ 14 ಕ್ಕೆ ಏರಿಕೆ