Select Your Language

Notifications

webdunia
webdunia
webdunia
webdunia

ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ನೇಮಕ

ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ನೇಮಕ
ಬೆಂಗಳೂರು , ಮಂಗಳವಾರ, 17 ಮೇ 2022 (12:48 IST)
ಬೆಂಗಳೂರು : ನಗರದ ನೂತನ ಪೊಲೀಸ್ ಆಯುಕ್ತರನ್ನಾಗಿ ಸಿ.ಹೆಚ್.ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇದುವರೆಗೂ ಕಮಿಷನರ್ ಸ್ಥಾನದಲ್ಲಿದ್ದ ಕಮಲ್ ಪಂತ್ ಅವರನ್ನು ಬೆಂಗಳೂರು ನೇಮಕಾತಿ ವಿಭಾಗದ ಡಿಜಿಯಾಗಿ ವರ್ಗಾಯಿಸಲಾಗಿದೆ. 

1991 ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಪ್ರತಾಪ್ ರೆಡ್ಡಿ, ಆಂಧ್ರಪ್ರದೇಶದ ಗುಂಟೂರು ಮೂಲದವರು. ಬೆಂಗಳೂರಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಕೆಲಸ ಮಾಡಿದ್ದರು.

ಕಾನೂನು ಸುವ್ಯವಸ್ಥೆ ಎಡಿಜಿಪಿ ಹುದ್ದೆಯಿಂದ ಬೆಂಗಳೂರು ಪೊಲೀಸ್ ಆಯುಕ್ತರಾಗಿ ವರ್ಗಾವಣೆಗೊಂಡಿದ್ದಾರೆ. ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ಅಲೋಕ್ ಕುಮಾರ್ ನಿಯುಕ್ತಿಗೊಂಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ!