Publish Date: Mon, 19 Jun 2023 (14:38 IST)
Updated Date: Mon, 19 Jun 2023 (13:41 IST)
ಮೈಸೂರು : ಸಂಸದ ಪ್ರತಾಪ್ ಸಿಂಹ ಅವರಿಗೆ ತಲೆ ಕೆಟ್ಟಿದೆ. ಅರ್ಥವಿಲ್ಲದ ಹೇಳಿಕೆ ನೀಡುತ್ತಾ ಜಾತಿಗೆ ಒರೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ತಲೆ ಕೆಟ್ಟಿದೆ, ಅವರದ್ದು ಚಿಲ್ಲರೆ ಮನಸ್ಥಿತಿ ಎಂದು ಸಚಿವ ಎಂ.ಬಿ ಪಾಟೀಲ್ ಗುಡುಗಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʻಎಂ.ಬಿ ಪಾಟೀಲ್ ಅವರ ಹೆಗಲ ಮೇಲೆ ಸಿದ್ದರಾಮಯ್ಯ ಇಟ್ಟು ಹೊಡೆದ ಗುಂಡು ಡಿಕೆ ಶಿವಕುಮಾರ್ಗೆ ತಗುಲಿಲ್ವಾ?ʼ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಕಿಡಿ ಕಾರಿದ್ದಾರೆ.
ಪ್ರತಾಪ್ ಸಿಂಹ ಅವರಿಗೆ ತಲೆ ಕೆಟ್ಟಿದೆ, ಜಾತಿಗೆ ಒರೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇದು ಅವರ ಚಿಲ್ಲರೆ ಮನಸ್ಥಿತಿ ತೋರಿಸುತ್ತಿದೆ. ಸಿದ್ದರಾಮಯ್ಯ ಅವ್ರು ನನ್ನ ಹೆಗಲ ಮೇಲೆ ಗನ್ ಇಟ್ಟು ಯಾರಿಗೂ ಗುಂಡು ಹೊಡೆಯುವ ಕೆಲಸ ಮಾಡಿಲ್ಲ. ನಾನೂ ಕೂಡ ಅದಕ್ಕೆ ಆಸ್ಪದ ಕೊಟ್ಟಿಲ್ಲ. ಹೊಡೆಯೋದಿದ್ದರೆ ನಾವೇ ಡೈರೆಕ್ಟ್ ಆಗಿ ಹೊಡಿಯುತ್ತೇವೆ. ನನ್ನ ಡಿ.ಕೆ ಶಿವಕುಮಾರ್ ಸಂಬಂಧ ಉತ್ತಮವಾಗಿದೆ. ಒಂದು ವಿಚಾರ ಬಂದಾಗ ಅಭಿಪ್ರಾಯ, ಭಿನ್ನಾಭಿಪ್ರಾಯ ಇರಬಹುದು. ಅದು ಪ್ರಜಾಪ್ರಭುತ್ವದಲ್ಲಿ ಸಹಜ ಎಂದು ಸ್ಪಷ್ಟನೆ ನೀಡಿದರು.
ramya kosira
Publish Date: Mon, 19 Jun 2023 (14:38 IST)
Updated Date: Mon, 19 Jun 2023 (13:41 IST)