Select Your Language

Notifications

webdunia
webdunia
webdunia
webdunia

ಪ್ರತಾಪ್ ಸಿಂಹ ಬಿಡುಗಡೆ ಮಾಡದಿದ್ರೆ ರಾಜ್ಯಾದ್ಯಂತ ಪ್ರತಿಭಟನೆ: ಬಿಎಸ್‌ವೈ ವಾರ್ನಿಂಗ್

ಪ್ರತಾಪ್ ಸಿಂಹ ಬಿಡುಗಡೆ ಮಾಡದಿದ್ರೆ ರಾಜ್ಯಾದ್ಯಂತ ಪ್ರತಿಭಟನೆ: ಬಿಎಸ್‌ವೈ ವಾರ್ನಿಂಗ್
ಅಫ್ಜಲ್‌ಪುರ್ , ಭಾನುವಾರ, 3 ಡಿಸೆಂಬರ್ 2017 (18:31 IST)
ಬಿಜೆಪಿ ಸಂಸದ ಪ್ರತಾಪ್ ಸಿಂಹರನ್ನು ಇಂದು ಸಂಜೆಯೊಳಗೆ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದ್ದಾರೆ.
ಹನುಮಾನ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ಪೊಲೀಸರ ಬ್ಯಾರಿಕೇಡ್ ಮೇಲೆ ಕಾರು ಹತ್ತಿಸಿ ಮಹಿಳಾ ಪೊಲೀಸ್ ಅಧಿಕಾರಿಯನ್ನು ಪ್ರಾಣಾಪಾಯಕ್ಕೆ ಸಿಲುಕಿಸಿದ ಪ್ರತಾಪ್ ಸಿಂಹ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ.
 
ಸಿಎಂ ಸಿದ್ದರಾಮಯ್ಯ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಇಂದು ಪ್ರತಾಪ್ ಸಿಂಹರನ್ನು ಬಿಡುಗಡೆ ಮಾಡದಿದ್ದಲ್ಲಿ ನಾಳೆ ಹುಣಸೂರು ಬಂದ್‌ಗೆ ಕರೆ ನೀಡಲಾಗುವುದು ಎಂದು ಎಚ್ಚರಿಸಿದ್ದಾರೆ.
 
ಸಿದ್ದರಾಮಯ್ಯ ಸಿಎಂ ಆದ ಮೇಲೆ ಭ್ರಷ್ಟಾಚಾರದಲ್ಲಿ ದೇಶದಲ್ಲಿಯೇ ಮೊದಲನೇ ಸ್ಥಾನ ಪಡೆದಿದೆ. ಅಪರಾಧ ಪ್ರಕರಣಗಳಲ್ಲಿ ಎರಡನೇ ಸ್ಥಾನ ಪಡೆದಿದೆ. ಇದೇ ಸಿದ್ದರಾಮಯ್ಯನವರ ಸಾಧನೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಗುಜರಾತ್: ಬಂಡುಕೋರ ನಾಯಕರಿಗೆ ಬಿಸಿ ಮುಟ್ಟಿಸಿದ ಅಮಿತ್ ಶಾ