Daily Horoscope
✕

ಸಿಎಂ ಅದನ್ನು ನೋಡಿದರೆ ಮುಖ ಮುಚ್ಚಿಕೊಂಡು ಓಡಬೇಕು

Sampriya
ಸೋಮವಾರ, 15 ಸೆಪ್ಟಂಬರ್ 2025 (20:33 IST)
ಬೆಂಗಳೂರು: ತನ್ನನ್ನು ಮೂರ್ಖ ಎಂದು‌ ಕರೆದ‌‌ ಸಿಎಂ‌ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಮಾಜಿ ಸಂಸದ ಪ್ರತಾಪ್ ಸಿಂಹ, 14 ಸೈಟ್ ನುಂಗಿದ ನೀವು ನನಗೆ ಹೇಳಲು ಬರುವುದು ಬೇಡ ಎಂದು ತಿರುಗೇಟು ನೀಡಿದ್ದಾರೆ. 

ದಸರಾವನ್ನು ಬಾನು ಮುಷ್ತಾಕ್ ಉದ್ಘಾಟಿಸುವುದಕ್ಕೆ‌ವಿರೋಧ ವ್ಯಕ್ತಪಡಿಸಿದ ಪ್ರತಾಪ್‌ ಸಿಂಹರನ್ನು ಸಿಎಂ‌ ಮೂರ್ಖ ಎಂದಿದ್ದರು. 

ಈ‌ ವಿಚಾರವಾಗಿ‌ ಪ್ರತಿಕ್ರಿಯಿಸಿದ ಪ್ರತಾಪ್, ಸಿದ್ದರಾಮಯ್ಯ ಸರ್ ಏನು ಬೇಕಾದರೂ ನನ್ನ ಕರೆಯಲಿ. ಅವರಿಗೂ ಸೋಷಿಯಲ್ ಮೀಡಿಯಯಾದಲ್ಲಿ ಏನೇನು ಕರೆಯುತ್ತಾರೆ ಎನ್ನುವುದನ್ನು ನೋಡಲಿ. ಅದನ್ನು ನೋಡಿದರೆ ಅವರು ಮುಖ ಮುಚ್ಚಿಕೊಂಡು ಓಡಾಡಬೇಕಾಗುತ್ತದೆ ಎಂದು ಹೇಳಿದರು.

ಹೈಕೋರ್ಟ್‌ನಲ್ಲಿ ತನ್ನ ಅರ್ಜಿ ವಜಾಗೊಂಡಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಕೋರ್ಟ್ ವಿಶ್ವಾಸಾರ್ಹತೆ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ. ಜಾತ್ಯಾತೀತತೆಯ ಚೌಕಟ್ಟಿನ ಅಡಿಯಲ್ಲಿ ಪಿಐಎಲ್ (PIL) ವಜಾ ಆಗಿದೆ. ಅದೇ ವಾಕ್ ಸ್ವಾತಂತ್ರ‍್ಯ ಬಳಸಿಕೊಂಡು ಮಾತನಾಡುತ್ತಿದ್ದೇನೆ ಅಷ್ಟೇ ಎಂದರು.  

ಮುಡಾದಲ್ಲಿ 14 ಸೈಟುಗಳನ್ನು ಪಡೆದಿದ್ದು ಹಗಲು‌ ದರೋಡೆ ಆಗಿತ್ತು. ಇಂಥ ಹಗಲು ದರೋಡೆ ಪ್ರಕರಣವನ್ನು ಹೈಕೋರ್ಟ್‌ನಲ್ಲಿ ವಜಾ ಮಾಡಲಾಯಿತು. ಇನ್ನೂ‌‌ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಹೂಡಿದ ಸಮೀರ್ ಗೆ ಕೋರ್ಟ್ ಜಾಮೀನು ನೀಡಿದೆ. 

 ಮಹೇಶ್ ತಿಮರೋಡಿ ಕೂಡಾ ಆರಾಮವಾಗಿ ಓಡಾಡಿಕೊಂಡಿದ್ದಾನೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments