ದಸರಾ ಉದ್ಘಾಟನೆ ವಿವಾದ, ಕೋರ್ಟ್‌ನಲ್ಲಿ ಹಿನ್ನಡೆ ಬೆನ್ನಲ್ಲೇ ಪೋಸ್ಟ್ ಹಂಚಿಕೊಂಡ ಪ್ರತಾಪ್ ಸಿಂಹ

Sampriya
ಸೋಮವಾರ, 15 ಸೆಪ್ಟಂಬರ್ 2025 (17:49 IST)
ಮೈಸೂರು: ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ಅಹ್ವಾನ ನೀಡಿರುವ ಕ್ರಮವನ್ನು ಪ್ರಶ್ನಿಸಿ ಪ್ರತಾಪ್ ಸಿಂಹ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಕೋರ್ಟ್‌ನಲ್ಲಿ ಹಿನ್ನಡೆಯಾಗುತ್ತಿದ್ದ ಹಾಗೇ ಮಾಜಿ ಸಂಸದರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡು ಬರೆದು ಪೋಸ್ಟ್ ಹಾಕಿದ್ದಾರೆ. 

ಈ ಭಾಷಣವನ್ನು ಕೋರ್ಟ್‌ನ ಮುಂದಿಟ್ಟಿದ್ದೆವು, ಇದಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯದಲ್ಲಿ ಅವಕಾಶವಿದೆ ಎನ್ನುವುದಾದರೆ, ಇದು ಹಿಂದೂ ದೇವತೆ ಮತ್ತು ಹಿಂದೂ ಸಂಸ್ಕೃತಿಯ ಅಂಗವಾಗಿರುವ ಅರಿಶಿಣ ಕುಂಕುಮದ ಮೇಲಿನ ದ್ವೇಷವಲ್ಲ ಎನ್ನುವುದಾದರೆ ನಮ್ಮ ನಾಯಕರ ವಿರುದ್ಧ ಸಿದ್ದರಾಮಯ್ಯ ಸರ್ಕಾರ ಹಾಕಿರುವ ಬಹಳಷ್ಟು FIRಗಳನ್ನು ಕೂಡಲೇ ರದ್ದಾಗಬೇಕಾಗುತ್ತದೆ ಎಂದು ಹೇಳಿದ್ದಾರೆ. 

ಪಿಐಎಲ್‌ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಖಬ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಷಿ ಅವರಿದ್ದ ವಿಭಾಗೀಯ ಪೀಠ, ವಜಾಗೊಳಿಸಿ ಆದೇಶ ನೀಡಿದೆ.

ದಸರಾ ಉದ್ಘಾಟನೆ ವಿಚಾರದಲ್ಲಿ ಯಾವುದೇ ಹಕ್ಕು ಉಲ್ಲಂಘನೆ ಆಗಿರುವುದು ಕಂಡುಬಂದಿಲ್ಲ, ಹೀಗಾಗಿ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಪೀಠ ಹೇಳಿದೆ.

ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ಎರಡು ದಿನಗಳ ಬಳಿಕ ಬೆಂಗಳೂರಿನ ಹೆಚ್.ಎಸ್.ಗೌರವ್, ಉದ್ಯಮಿ ಟಿ.ಗಿರೀಶ್ ಕುಮಾರ್ ಹಾಗೂ ಅಭಿನವ ಭಾರತ್ ಪಾರ್ಟಿಯ ರಾಷ್ಟ್ರೀಯ ಉಪಾಧ್ಯಕ್ಷೆ ಆರ್.ಸೌಮ್ಯ ಅವರು ಪ್ರತ್ಯೇಕವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಶಾ ಕಾರ್ಯಕರ್ತೆಯರಿಗೆ ಮೂರು ತಿಂಗಳಿಂದ ಸಂಬಳವೇ ಇಲ್ಲ: ಪಾಪರ್ ಸರ್ಕಾರ ಎಂದು ಬೈದ ಆರ್ ಅಶೋಕ್

ಮುಂದಿನ ಸುದ್ದಿ
Show comments