Select Your Language

Notifications

webdunia
webdunia
webdunia
webdunia

ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಪ್ರತಾಪಸಿಂಹ ಇಷ್ಟೆಲ್ಲಾ ಕಸರತ್ತು: ಡಿಕೆಶಿ ಲೇವಡಿ

Former MP Pratapasimha

Sampriya

ಬೆಂಗಳೂರು , ಭಾನುವಾರ, 7 ಸೆಪ್ಟಂಬರ್ 2025 (15:11 IST)
ಬೆಂಗಳೂರು: ಪ್ರತಾಪಸಿಂಹ ಅವರನ್ನು ಈಗಾಗಲೇ ಬಿಜೆಪಿ ದೂರವಿಟ್ಟಿದೆ. ತಾನು ಬದುಕಿದ್ದೇನೆಂದು ತೋರಿಸಿಕೊಳ್ಳಲು ಇಷ್ಟೆಲ್ಲಾ ಸರ್ಕಸ್‌ ಮಾಡುತ್ತಿದ್ದಾರೆ ಎಂದು  ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದರು.

ತಾನು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಕೆಲವರು ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ಪ್ರತಾಪಸಿಂಹ ವಿರುದ್ಧ ವಾಗ್ದಾಳಿ ನಡೆಸಿದರು

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದನ್ನು ಪ್ರಶ್ನಿಸಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹೈ ಕೋರ್ಟ್ ಮೆಟ್ಟಿಲೇರಿರುವ ಬಗ್ಗೆ ಸುದ್ದಿಗಾರರು ಕೇಳಿದಾಗ,  ಅವರ ಪಕ್ಷ ಅವರನ್ನು (ಪ್ರತಾಪ್ ಸಿಂಹ) ಕಡೆಗಣಿಸಿದೆ. ಪಾಪ ಆತನಿಗೂ ರಾಜಕೀಯ ಮಾಡಬೇಕಿದೆ. ಹೀಗಾಗಿ ತನ್ನ ಅಸ್ತಿತ್ವ ತೋರಿಸಿಕೊಳ್ಳಲು ಹೀಗೆಲ್ಲಾ ಮಾಡುತ್ತಿದ್ದಾರೆ ಎಂದರು.

ನಾಡ ಹಬ್ಬ ವಿಚಾರದಲ್ಲಿ ರಾಜಕೀಯ ಮಾಡಲು ಅವರಿಗೆ ಬೇರೆ ವಿಚಾರ ಇಲ್ಲ. ಅವರಿಗೆ ರಾಜ್ಯದ ಬಗ್ಗೆ ಕಾಳಜಿ ಇದ್ದರೆ ದೆಹಲಿಗೆ ಹೋಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಬೆಂಗಳೂರು ಅಭಿವೃದ್ಧಿಗೆ ಅನುದಾನ, ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಅನುಮತಿ, ನರೇಗಾ ಅನುದಾನ ಕೊಡಿಸಲಿ ಎಂದು ಸವಾಲು ಹಾಕಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಒಂದು ವೇಳೆ ಗ್ರಹಣದ ಸಂದರ್ಭದಲ್ಲಿ ಊಟ ಸೇವಿಸಲೇ ಬೇಕಿದ್ದರೆ ಈ ರೀತಿ ಮಾಡಿ