Publish Date: Mon, 04 Dec 2017 (16:26 IST)
Updated Date: Mon, 04 Dec 2017 (16:29 IST)
ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ ಕಾಮನ್‌ಸೆನ್ಸ್ ಇಲ್ಲ. ರಾಜಕೀಯ ಪ್ರಬುದ್ಧತೆಯಂತೂ ಇಲ್ಲವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸಂಸದ ಪ್ರತಾಪ್‌ಗೆ ಪಾರ್ಲಿಮೆಂಟರಿ ಭಾಷೆ ಗೊತ್ತಿಲ್ಲ. ನಾವು ಅವರ ಮಟ್ಟಕ್ಕೆ ಹೋಗಿ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.
ಪ್ರತಾಪ್‌ಗೆ ಪೊಲಿಟಿಕಲ್ ಕಲ್ಚರ್ ಗೊತ್ತಿಲ್ಲ ಅನ್ನಿಸುತ್ತೆ. ಇದೀಗ ನಡೆದಿರುವ ಘಟನೆಗಳಿಂದ ಅವರಿಗೆ ರಾಜಕೀಯ ಪ್ರಬುದ್ಧತೆಯಿಲ್ಲ ಎನ್ನುವುದು ಬಹಿರಂಗವಾಗಿದೆ ಎಂದು ಟೀಕಿಸಿದರು.
ಬಿಜೆಪಿಯಿಂದ ರಾಜ್ಯದಲ್ಲಿ ನಿರಂತರವಾಗಿ ಶಾಂತಿ ಕದಡುವ ಪ್ರಯತ್ನ ಸಾಗುತ್ತಿದೆ. ಇದಕ್ಕೆ ಬಿಜೆಪಿ ಹೈಕಮಾಂಡ್ ಕೂಡಾ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ. ಇದಕ್ಕೆ ಪ್ರತಾಪ್ ಸಿಂಹ ವಿಡಿಯೋದಲ್ಲಿ ನೀಡಿದ ಹೇಳಿಕೆ ಸಾಕ್ಷಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.