Publish Date: Mon, 04 Dec 2017 (08:55 IST)
Updated Date: Mon, 04 Dec 2017 (09:21 IST)
ಸಂಸದ ಪ್ರತಾಪ ಸಿಂಹ ಅವರ ಬಂಧನ ಖಂಡಿಸಿ ಬಿಜೆಪಿ ಕರೆ ನೀಡಿದ್ದ ಹುಣಸೂರು ಪಟ್ಟಣ ಬಂದ್ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಮಾಡಲಾಗಿದ್ದು, ಹುಣಸೂರು ಬಂದ್್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮುನ್ನಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತದಿಂದ ಶಾಲಾ-ಕಾಲೇಜುಗಳಿಗೆ ರಜೇ ಘೋಷಿಸಲಾಗಿದೆ. ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಮೈಸೂರಿನ ಗಾಂಧಿ ವೃತ್ತದಲ್ಲಿ ಬಿಜೆಪಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಸಂಸದೆ ಶೋಭಾ ಕರಂದ್ಲಾಜೆ ಪ್ರತಿಭಟನೆಯಲ್ಲಿ ಭಾಗವಹಿಸಲು ಮೈಸೂರಿಗೆ ಬಂದಿದ್ದಾರೆ.
ಹನುಮ ಜಯಂತಿಯ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಸಂಸದ ಪ್ರತಾಪಸಿಂಹ ಅವರನ್ನುಪೊಲೀಸರು ಬಂಧಿಸಿದ್ದನ್ನು ಖಂಡಿಸಿ ಹುಣಸೂರು ಬಂದ್್ಗೆ ಕರೆ ನೀಡಲಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.