Select Your Language

Notifications

webdunia
webdunia
webdunia
Monday, 7 April 2025
webdunia

‘ಆಯಮ್ಮ ಕೆಲಸ ಮಾಡಲ್ಲ’ ಸುಮಲತಾ ಅಂಬರೀಶ್ ಬಗ್ಗೆ ಸಂಸದ ಪ್ರತಾಪ್ ಸಿಂಹ ಮಾತು ವೈರಲ್

ಸುಮಲತಾ ಅಂಬರೀಶ್
ಮಂಡ್ಯ , ಭಾನುವಾರ, 15 ನವೆಂಬರ್ 2020 (11:18 IST)
ಮಂಡ್ಯ: ಸ್ವತಂತ್ರ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಲ್ಲಿ ಪ್ರಚಂಡ ಜಯಭೇರಿ ಬಾರಿಸಿ ಮೊದಲ ಬಾರಿಗೆ ಸಂಸದೆಯಾದ ಸುಮಲತಾ ಅಂಬರೀಶ್ ಬಗ್ಗೆ ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿದ ಮಾತಿನ ವಿಡಿಯೋವೊಂದು ಈಗ ವೈರಲ್ ಆಗಿದೆ.


‘ಆಯಮ್ಮ ಏನೂ ಕೆಲಸ ಮಾಡಲ್ಲ. ಮಂಡ್ಯದ ಕೆಲಸ ಏನೇ ಇದ್ದರೂ ನನಗೆ ಹೇಳಿ’ ಎಂದು ಯೋಜನಾ ನಿರ್ದೇಶಕರ ಜತೆ ಪ್ರತಾಪ್ ಸಿಂಹ ಮೊಬೈಲ್ ನಲ್ಲಿ ಸಂಭಾಷಣೆ ಮಾಡುವುದನ್ನು ಯಾರೋ ಮೊಬೈಲ್ ನಲ್ಲಿ ಸೆರೆಹಿಡಿದು ವಿಡಿಯೋ ವೈರಲ್ ಮಾಡಿದ್ದಾರೆ. ದೇವೇಗೌಡರ ಕುಟುಂಬದವರನ್ನು ಸೋಲಿಸುವ ಸಲುವಾಗಿ ಜನ ಅವರನ್ನು ಅಲ್ಲಿ ಗೆಲ್ಲಿಸಿದ್ದಾರಷ್ಟೇ. ಅವರ ಬಳಿ ಏನೂ ಕೆಲಸವಾಗಲ್ಲ ಎಂದು ಪ್ರತಾಪ್ ಸಿಂಹ ಹೇಳಿದ್ದು ಸುಮಲತಾ ಪರ ಬೆಂಬಲಿಗರನ್ನು ಕೆರಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜ್ಯೋತಿಷಿ ಮಾತು ಕೇಳಿ ಪತ್ನಿಗೆ ಇನ್ನಿಲ್ಲದ ಕಿರುಕುಳ ಕೊಟ್ಟ