ಮಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದರ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಯನ್ನು ಕೋರ್ಟ್‌ಗೆ ಹಾಜರು ಪಡಿಸುವ ವೇಳೆ ಯುವಕನೊಬ್ಬ ಹಣೆಗೆ ಮುತ್ತಿಟ್ಟು, ಶುಭಕೋರಿದ ಘಟನೆ ಇಂದು ಬೆಳ್ತಂಗಡಿಯಲ್ಲಿ ನಡೆದಿದೆ.
ಇಂದು (ಏಪ್ರಿಲ್,07) ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು 2017ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡದ ಬೆಳ್ತಂಗಡಿ ಕೋರ್ಟ್‌ಗೆ ಹಾಜರು ಪಡಿಸಲಾಗಿತ್ತು. ಪೊಲೀಸರು ಇರುವಾಗಲೇ ಶಾಫಿಯ ಬೆಂಬಲಿಗನೊಬ್ಬ ಆತನ ಹಣೆಗೆ ಮುತ್ತಿಟ್ಟಿದ್ದಾನೆ. ಶಾಫಿಯನ್ನು ನೋಡಲು ಆತನ ಬೆಂಬಲಿಗರು ಸೇರಿದ್ದರು.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾರಾಗೃಹ ವಾಸದಲ್ಲಿದ್ದ ಶಾಫಿ ಬೆಳ್ಳಾರೆಯನ್ನು 2017ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಂದು ಬೆಳ್ತಂಗಡಿ ಕೋರ್ಟ್‌ಗೆ ಹಾಜರು ಪಡಿಸಿದ್ದರು.
ಜುಲೈ 26, 2022ರಂದು ದಕ್ಷಿಣ ಕನ್ನಡದ ಬೆಳ್ಳಾರೆ ಗ್ರಾಮದಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದು. ಇದು ಮುಸ್ಲಿಂ ಮತ್ತು ಹಿಂದುತ್ವ ಗುಂಪುಗಳ ನಡುವಿನ ವೈಷಮ್ಯಕ್ಕೆ ಪ್ರವೀಣ್ ನೆಟ್ಟಾರು ಅವರನ್ನು ಪ್ರತೀಕಾರಕ್ಕೆ ನಡೆದ ಹತ್ಯೆ ಎನ್ನಲಾಗಿದೆ.