ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಪೊಲೀಸರ ಎದುರೇ ಹತ್ಯೆ ಆರೋಪಿಗೆ ಮುತ್ತಿಟ್ಟ ಯುವಕ

Sampriya
ಸೋಮವಾರ, 7 ಏಪ್ರಿಲ್ 2025 (19:21 IST)
Photo Courtesy X
ಮಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದರ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಯನ್ನು ಕೋರ್ಟ್‌ಗೆ ಹಾಜರು ಪಡಿಸುವ ವೇಳೆ ಯುವಕನೊಬ್ಬ ಹಣೆಗೆ ಮುತ್ತಿಟ್ಟು, ಶುಭಕೋರಿದ ಘಟನೆ ಇಂದು ಬೆಳ್ತಂಗಡಿಯಲ್ಲಿ ನಡೆದಿದೆ.

ಇಂದು (ಏಪ್ರಿಲ್,07) ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು 2017ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡದ ಬೆಳ್ತಂಗಡಿ ಕೋರ್ಟ್‌‌ಗೆ ಹಾಜರು ಪಡಿಸಲಾಗಿತ್ತು. ಪೊಲೀಸರು ಇರುವಾಗಲೇ ಶಾಫಿಯ ಬೆಂಬಲಿಗನೊಬ್ಬ ಆತನ ಹಣೆಗೆ ಮುತ್ತಿಟ್ಟಿದ್ದಾನೆ. ಶಾಫಿಯನ್ನು ನೋಡಲು ಆತನ ಬೆಂಬಲಿಗರು ಸೇರಿದ್ದರು.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾರಾಗೃಹ ವಾಸದಲ್ಲಿದ್ದ ಶಾಫಿ ಬೆಳ್ಳಾರೆಯನ್ನು 2017ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಂದು ಬೆಳ್ತಂಗಡಿ ಕೋರ್ಟ್‌ಗೆ ಹಾಜರು ಪಡಿಸಿದ್ದರು.

ಜುಲೈ 26, 2022ರಂದು ದಕ್ಷಿಣ ಕನ್ನಡದ ಬೆಳ್ಳಾರೆ ಗ್ರಾಮದಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದು. ಇದು ಮುಸ್ಲಿಂ ಮತ್ತು ಹಿಂದುತ್ವ ಗುಂಪುಗಳ ನಡುವಿನ ವೈಷಮ್ಯಕ್ಕೆ ಪ್ರವೀಣ್ ನೆಟ್ಟಾರು ಅವರನ್ನು ಪ್ರತೀಕಾರಕ್ಕೆ ನಡೆದ ಹತ್ಯೆ ಎನ್ನಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವರ ಕುರ್ಚಿ ಕಾಳಗದಲ್ಲಿ ಕರ್ನಾಟಕದ ಉದ್ಯೋಗ ಆಂಧ್ರ ಪಾಲಾಗಿದೆ: ಛಲವಾದಿ ನಾರಾಯಣಸ್ವಾಮಿ

ರಾಷ್ಟ್ರ ರಾಜಧಾನಿಯಲ್ಲಿ ಸಾಂಪ್ರದಾಯಿಕ ಪಟಾಕಿಗಳ ಅಬ್ಬರಕ್ಕೆ ಸುಪ್ರೀಂ ಕೋರ್ಟ್‌ ಬ್ರೇಕ್

ಡಿ.ಕೆ.ಶಿವಕುಮಾರ್‌ ಬೆನ್ನಲ್ಲೇ ಹಾಸನಾಂಬೆಯ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಆಯುರ್ವೇದ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ: ಮೋದಿ ಸಂತಾಪ

ಹೃದಯಸ್ತಂಭನ: ಗೋವಾದ ಎರಡು ಬಾರಿಯ ಮುಖ್ಯಮಂತ್ರಿ, ಹಾಲಿ ಸಚಿವ ರವಿ ನಾಯ್ಕ್ ನಿಧನ

ಮುಂದಿನ ಸುದ್ದಿ
Show comments