ಬೆಳಗಾವಿ: ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ಮತ್ತೋರ್ವ ಸಾವನ್ನಪ್ಪಿದ್ದು, ಇದರೊಂದಿಗೆ ರಾಜ್ಯದ ಮೂವರು ಸಾವನ್ನಪ್ಪಿದ್ದಾರೆ.
ಮೃತರನ್ನು ಬೆಳಗಾವಿಯ ಶೆಟ್ಟಿಗಲ್ಲಿಯ ಅರುಣ ಕೋಪರ್ಡೆ ಸಾವನ್ನಪ್ಪಿದ್ದಾರೆ.
ಪತ್ನಿ ಜತೆಗೆ ಪ್ರಯಾಗ್‌ರಾಜ್‌ನಲ್ಲಿ ತೆರಳಿದ್ದ ಅವರು ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಗಂಭೀರ ಗಾಯಗೊಂಡಿದ್ದ ಅರುಣ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅರುಣ್ ಕೊಪಾರ್ಡೆ ಮನೆಗೆ ಬೆಳಗಾವಿ ತಹಶಿಲ್ದಾರ್ ಸಿಬ್ಬಂದಿ ಭೇಟಿ ನೀಡಿ ಖಚಿತಪಡಿಸಿದ್ದಾರೆ.