Select Your Language

Notifications

webdunia
webdunia
webdunia
webdunia

ಚುರುಕುಗೊಂಡ ಪೂರ್ವ ಮುಂಗಾರು: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ನಾಲ್ಕೈದು ದಿನ ಮಳೆ ಮುನ್ಸೂಚನೆ

Weather Department, Temperature in Karnataka, East Monsoon brisk

Sampriya

ಬೆಂಗಳೂರು , ಭಾನುವಾರ, 23 ಮಾರ್ಚ್ 2025 (10:32 IST)
Photo Courtesy X
ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದ್ದು, ಮುಂದಿನ ನಾಲ್ಕೈದು ದಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ ಸೇರಿ ರಾಜ್ಯದ 20 ಜಿಲ್ಲೆಗಳಲ್ಲಿ ಭಾನುವಾರ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮಾ.27ರ ವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಹಗುರ ಮಳೆ ಮುಂದುವರಿಯಲಿದೆ.  ಬೆಂಗಳೂರಿನಲ್ಲೂ ಮಧ್ಯಾಹ್ನದ ಬಳಿಕ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ. ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇಂದು ದಕ್ಷಿಣ ಕನ್ನಡ, ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಚಿತ್ರದುರ್ಗ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಕೆಲವೆಡೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.

ಸೋಮವಾರ ದಕ್ಷಿಣ ಕನ್ನಡ, ಬೀದರ್‌, ಕಲಬುರಗಿ, ವಿಜಯಪುರ, ಹಾಸನ ಮತ್ತು ಚಿಕ್ಕಮಗಳೂರು, ಕೊಡಗು ಜಿಲ್ಲೆಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಮಾ.25ರಂದು ಕೊಡಗು, ಉಡುಪಿ, ದಕ್ಷಿಣ ಕನ್ನಡ, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಾದ್ಯಂತಮಳೆ ಸಾಧ್ಯತೆ ಇದೆ.  28ರ ನಂತರ ರಾಜ್ಯಾದ್ಯಂತ ಒಣಹವೆ ಮುಂದುವರಿಯುವ ಸಾಧ್ಯತೆಗಳಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್‌ ಶಾಸಕರು ಧರ್ಮೇಗೌಡರನ್ನು ಸ್ಪೀಕರ್ ಪೀಠದಿಂದ ಎಳೆದು, ನೂಕಿದ ವಿಡಿಯೋ ಹಂಚಿಕೊಂಡ ಬಿಜೆಪಿ