ರಾಜ್ಯಕ್ಕೆ ಅವಧಿಪೂರ್ವ ಮುಂಗಾರು ಪ್ರವೇಶ: ಬೆಂಗಳೂರಿನಲ್ಲಿ ನೂರು ವರ್ಷಗಳ ದಾಖಲೆ ಮುರಿದ ಮಹಾಮಳೆ

Sampriya
ಸೋಮವಾರ, 26 ಮೇ 2025 (15:17 IST)
Photo Courtesy X
ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಅವಧಿಗೆ ಪೂರ್ವ ಮುಂಗಾರು ಪ್ರವೇಶಿಸಿದೆ. ಹೀಗಾಗಿ, ರಾಜ್ಯ ರಾಜಧಾನಿಯ ಇತಿಹಾಸದಲ್ಲೇ ಮೊದಲ ಬಾರಿಗೆ ಮೇ ತಿಂಗಳಿನಲ್ಲಿ ದಾಖಲೆಯ ಮಳೆಯಾಗಿದೆ.

ಬೆಂಗಳೂರಲ್ಲಿ ಈ ಬಾರಿ ಬಿದ್ದ ಮಳೆ ದಾಖಲೆ ಹೊಸ ಸೃಷ್ಟಿಸಿದೆ. ಈ ತಿಂಗಳಿನಲ್ಲಿ ಸುರಿದ ಮಳೆಯು ನೂರು ವರ್ಷದಲ್ಲೇ ಅಧಿಕವಾದುದು. ಬೆಂಗಳೂರಲ್ಲಿ ಇನ್ನೂ ಒಂದು ವಾರ ಸಾಧಾರಣ ಮಳೆ ಮುಂದುವರಿಯಲಿದೆ. ಗಾಳಿ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿಎಸ್ ಪಾಟೀಲ್ ಹೇಳಿದ್ದಾರೆ.

ಸಿಲಿಕಾನ್‌ ಸಿಟಿಯಲ್ಲಿ ಮೇ ತಿಂಗಳಲ್ಲೇ 307.9 ಮಿಮೀ ಮಳೆ ದಾಖಲೆಯಾಗಿದೆ. ಅದೂ ಮೇ 1 ರಿಂದ ಮೇ 26 ರವರೆಗೆ ಈ‌ ಪ್ರಮಾಣದಲ್ಲಿ ಮಳೆಯಾಗಿದೆ. 2023 ಮೇ ತಿಂಗಳಲ್ಲಿ 305.4 ಮಿಮೀ ಮಳೆ ದಾಖಲಾಗಿತ್ತು. ಇದು ಇಲ್ಲಿಯವರೆಗಿನ ದಾಖಲೆಯಾಗಿತ್ತು. ಈ ದಾಖಲೆಯನ್ನು ಈ ಬಾರಿಯ ಮಳೆ ಮುರಿದಿದೆ.

ಕರ್ನಾಟಕ ರಾಜ್ಯಕ್ಕೆ ಜೂನ್ 5 ಕ್ಕೆ ಮುಂಗಾರು ಆಗಮನದ ನಿರೀಕ್ಷೆ ಇತ್ತು. ಆದರೆ ಮೇ 24ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ. ಈಗ ಸಂಪೂರ್ಣ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ. 2009 ರಲ್ಲಿ ಮೇ 23ಕ್ಕೆ ಕೇರಳ ಪ್ರವೇಶಿಸಿದ್ದ ಮುಂಗಾರು ಈ ಬಾರಿ ಮೇ 24ರಂದೇ ಪ್ರವೇಶ ಮಾಡಿದೆ‌. ಈ ಬಾರಿ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ