Daily Horoscope
✕

ತೀರ್ಥೋದ್ಭವ’ಕ್ಕೆ ತಲಕಾವೇರಿಯಲ್ಲಿ ಸಿದ್ಧತೆ

Webdunia
ಮಂಗಳವಾರ, 17 ಅಕ್ಟೋಬರ್ 2023 (18:00 IST)
ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರ ಕೊಡಗಿನ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ಕಾವೇರಿ, ತೀರ್ಥರೂಪಿಣಿಯಾಗಿ ಆವಿರ್ಭವಿಸಲಿದ್ದಾಳೆ. ಕರ್ಕಾಟಕ ಲಗ್ನ ತುಲಾ ಸಂಕ್ರಮಣ ಪುಣ್ಯ ಕಾಲದಲ್ಲಿ ತೀರ್ಥೋದ್ಭವ ನಡೆಯಲಿದೆ. ಜೀವ ನದಿಯನ್ನ ಕಣ್ತುಂಬಿಸಿಕೊಳ್ಳಲು ಸಹಸ್ರಾರು ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ತುಲಾ ಮಾಸದ ಮೊದಲ ದಿನ ಅಂದರೆ ತುಲಾ ಸಂಕ್ರಮಣದ ದಿನ ಪ್ರತಿ ವರ್ಷ ಕಾವೇರಿ ಕೊಡಗಿನ ಮಡಿಕೇರಿ ತಾಲೂಕಿನ ತಲಕಾವೇರಿಯ ಭ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಆವಿರ್ಭವಿಸಿ ಭಕ್ತರಿಗೆ ದರ್ಶನ ನೀಡುತ್ತಾಳೆ. ಈ ಪವಿತ್ರ ಘಳಿಗೆಯನ್ನು ಕಣ್ತುಂಬಿಸಿಕೊಳ್ಳಲು ದೇಶದ ಮೂಲೆ ಮೂಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಇಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ತುಲಾ ಲಘ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ. ಪ್ರಧಾನ ಅರ್ಚಕ ಗುರುರಾಜ್ ಆಚಾರ್ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಈ ಬಾರಿ ಮಧ್ಯ ರಾತ್ರಿ ತೀರ್ಥೋದ್ಭವವಾಗುವುದರಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು ಎಷ್ಟಿದೆ ಬಂಗಾರದ ಬೆಲೆ

ನಿಮ್ಮ ಮನೆ ನವೀಕರಣಕ್ಕೆ ಕೋಟಿ ಖರ್ಚು ಮಾಡ್ತೀರಿ, ಆಶಾ ಕಾರ್ಯಕರ್ತೆಯರಿಗೆ ದುಡ್ಡಿಲ್ವಾ: ಸಿಎಂ ಡಿಕೆಶಿಗೆ ಬಿಜೆಪಿ ಟಾಂಗ್ video

ರಾಜಕೀಯದಲ್ಲಿ ಸಿಡಿ ಗುಂಡು.. ಅಮ್ಮನ ಮುಂದೆ ಮಗುವಿನಂತೆ ಅತ್ತ ಸಿಎಂ ಯೋಗಿ Video

ಮುಂಬೈ ಮಾಲ್ ಮುಂದೆ ಯುವ ಜೋಡಿ ಮೇಲೆ ಹಲ್ಲೆ ನಡೆಸಿದ ಹುಡುಗರು video

ಲೈಂಗಿಕ ಕಿರುಕುಳ ಆರೋಪ; ಕಚೇರಿಯಲ್ಲೇ ಹಿರಿಯ ಅಧಿಕಾರಿಗೆ ಮಹಿಳಾ ಉದ್ಯೋಗಿಯಿಂದ ಥಳಿತ Video

ಮುಂದಿನ ಸುದ್ದಿ
Show comments