Select Your Language

Notifications

webdunia
webdunia
webdunia
webdunia

ಮತಗಳ್ಳತನ ವಿರುದ್ಧ ಬೃಹತ್ ಸಭೆಗೆ ಸಿದ್ಧತೆ: ಡಿಕೆ ಶಿವಕುಮಾರ್‌

DCM DK Shivkumar

Sampriya

ಬೆಂಗಳೂರು , ಶನಿವಾರ, 8 ನವೆಂಬರ್ 2025 (18:18 IST)
Photo Credit X
ಬೆಂಗಳೂರು: ಮತಗಳ್ಳತನ ವಿರುದ್ಧ ಸಹಿ ಸಂಗ್ರಹ ಅಭಿಯಾನ - ಕರ್ನಾಟಕದಲ್ಲಿ 1,12,41,000 ಸಹಿ ಸಂಗ್ರಹ ಮಾಡಿದ್ದು, ಇದನ್ನು ಇದೇ ತಿಂಗಳ 10ರಂದು ದೆಹಲಿಗೆ ರವಾನಿಸಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರು, ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. 

ಇಂದು ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿಗಳಾದ  ಸಿದ್ದರಾಮಯ್ಯ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು, ರಾಜ್ಯದಲ್ಲಿ ನಡೆದ ವೋಟ್ ಚೋರಿ ಸಹಿ ಸಂಗ್ರಹಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.

ಸಭೆಯಲ್ಲಿ ನಡೆದ ವಿಚಾರವನ್ನು ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. 

ನಮ್ಮ ಮತ- ನಮ್ಮ ಹಕ್ಕು!

ಮತಗಳ್ಳತನ ವಿರುದ್ಧ ಸಹಿ ಸಂಗ್ರಹ ಅಭಿಯಾನ - ಕರ್ನಾಟಕದಲ್ಲಿ 1,12,41,000 ಸಹಿ ಸಂಗ್ರಹ

ಇಂದು ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು, ರಾಜ್ಯದಲ್ಲಿ ನಡೆದ ವೋಟ್ ಚೋರಿ ಸಹಿ ಸಂಗ್ರಹಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದೆ. 

ಪ್ರಜಾಪ್ರಭುತ್ವದ ಶಕ್ತಿಯಾದ ಮತವನ್ನು ಕದಿಯುವ ಪ್ರಯತ್ನಗಳ ವಿರುದ್ಧ ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರು ಕರ್ನಾಟಕದಿಂದಲೇ ಧ್ವನಿ ಎತ್ತಿದ್ದಾರೆ. ಮಹದೇವಪುರ, ಆಳಂದ ಮಾತ್ರವಲ್ಲದೆ ವ್ಯಾಪಕವಾಗಿ ಹೊರ ರಾಜ್ಯಗಳಲ್ಲಿಯೂ ಮತಗಳ್ಳತನ ಪ್ರಕರಣಗಳು ನಡೆದಿರುವ ಬಗ್ಗೆ ಸಾಕ್ಷಿಸಮೇತ ಮಾಹಿತಿ ನೀಡಿ, ಮತದಾರರ ಹಕ್ಕುಗಳ ಉಳಿವಿಗಾಗಿ ಹೋರಾಟ ಮುಂದುವರೆಸಿದ್ದಾರೆ. ಈ ಹಿಂದೆ ಚಿಲುಮೆ ಸಂಸ್ಥೆಯನ್ನು ಬಳಸಿಕೊಂಡು ಯಾವ ರೀತಿಯಲ್ಲಿ ಮತದಾರರ ಮಾಹಿತಿ ಕಳ್ಳತನ ಮಾಡಲಾಯಿತು ಎಂಬುದು ರಾಜ್ಯದ ಜನರು ಗಮನಿಸಿದ್ದಾರೆ. ಆಳಂದ ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾವಣೆಗೆ ಮುನ್ನ 6,018 ಮತಗಳನ್ನು ಅಳಿಸಲು ಪ್ರಯತ್ನ ನಡೆದಿತ್ತು. ಇದೇ ರೀತಿ ರಾಜಸ್ಥಾನ, ಮಹಾರಾಷ್ಟ್ರ ಮತ್ತು ಹರಿಯಾಣ ಸೇರಿದಂತೆ ಹಲವಾರು ಇತರ ರಾಜ್ಯಗಳಲ್ಲಿ ಅಕ್ರಮಗಳು ಕಂಡುಬಂದಿವೆ.

ಮತ ಕಳ್ಳತನ ತಡೆದು ಪ್ರಜಾಪ್ರಭುತ್ವ ಉಳಿಸಲು ಕರ್ನಾಟಕದಿಂದ ಧ್ವನಿ ಎತ್ತಿರುವ ರಾಹುಲ್‌ ಗಾಂಧಿ ಅವರಿಗೆ ಕಾಂಗ್ರೆಸ್‌ ಪಕ್ಷ ಸೇರಿದಂತೆ ಎಲ್ಲಾ ಸಾರ್ವಜನಿಕರು ಪಕ್ಷಬೇಧ ಮರೆತು ಪ್ರತಿಯೊಬ್ಬರು ಸಹಕಾರ ನೀಡಬೇಕಿದೆ. ಮತದಾನದ ಹಕ್ಕಿನ ರಕ್ಷಣೆಗಾಗಿ ಸಹಿ ಸಂಗ್ರಹ ಅಭಿಯಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ನಾನು ಕೂಡ ಪಾಲ್ಗೊಂಡಿದ್ದೇವೆ. ವೋಟ್‌ ಚೋರಿ ವಿರುದ್ಧದ ಸಹಿ ಸಂಗ್ರಹ ಅಭಿಯಾನದಲ್ಲಿ ರಾಜ್ಯದಲ್ಲಿ ಇದುವರೆಗೆ 1,12,41,000 ಮತದಾರರು ಸಹಿ ಮಾಡಿ ಅಭಿಯಾನಕ್ಕೆ ಕೈಜೋಡಿಸಿದ್ದಾರೆ. ಸಹಿ ಸಂಗ್ರಹಕ್ಕೆ ಸಂಬಂಧಿಸಿದ ದಾಖಲೆಗಳನ್ನು 10ನೇ ತಾರೀಖಿನಂದು ದೆಹಲಿಯ ಎಐಸಿಸಿ ಕಚೇರಿಗೆ ತೆಗೆದುಕೊಂಡು ಹೋಗಿ ಮಾಹಿತಿ ನೀಡಲಾಗುವುದು. ಮತಗಳ್ಳತನ ವಿರುದ್ಧ ರಾಮ್‌ಲೀಲಾ ಮೈದಾನದಲ್ಲಿ ಬೃಹತ್ ಸಭೆ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಪ್ರಜಾಪ್ರಭುತ್ವದ ಉಳಿವಿಗಾಗಿ ಮತ ಕಳವು ವಿರುದ್ಧ ಅಭಿಯಾನದಲ್ಲಿ ಭಾಗಿಯಾದ ಪ್ರತಿಯೊಬ್ಬರಿಗೂ ಧನ್ಯವಾದಗಳು.

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಮತಗಳ್ಳತನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ.



Share this Story:

Follow Webdunia kannada

ಮುಂದಿನ ಸುದ್ದಿ

ತಲೆಗೆ ಬಂದೂಕಿಡುವ ಸರ್ಕಾರ ಜನರಿಗೆ ಬೇಡ: ಮಹಾಘಟಬಂಧನ ವಿರುದ್ಧ ಮೋದಿ ವಾಗ್ದಾಳಿ