Select Your Language

Notifications

webdunia
webdunia
webdunia
webdunia

ರಾಜ್ಯದ ಭಾಜಪ ರಥಯಾತ್ರೆಗೆ ತಯಾರಿ : ಬೊಮ್ಮಾಯಿ

ರಾಜ್ಯದ ಭಾಜಪ ರಥಯಾತ್ರೆಗೆ ತಯಾರಿ : ಬೊಮ್ಮಾಯಿ
ಬೆಂಗಳೂರು , ಶನಿವಾರ, 21 ಜನವರಿ 2023 (09:19 IST)
ಬೆಂಗಳೂರು : ರಾಜ್ಯದ ನಾಲ್ಕು ದಿಕ್ಕುಗಳಿಂದ ರಥಯಾತ್ರೆಯನ್ನು ಫೆಬ್ರವರಿ ಅಂತ್ಯದಲ್ಲಿ ಆರಂಭಿಸಲು ರೂಪರೇಷೆ ಸಿದ್ಧತೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಪಕ್ಷದ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಮಲ್ಲೇಶ್ವರಂನ ಭಾರತೀಯ ಜನತಾ ಪಕ್ಷದ ಜಗನ್ನಾಥ ಭವನ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷದ ಸಭೆ ನಡೆದಿದೆ. ಬರುವ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮಗಳು, ಅಧಿವೇಶನದ ಜೊತೆಜೊತೆಗೆ ಪಕ್ಷದ ಸಂಘಟನೆ, ಫೆಬ್ರವರಿ ಅಂತ್ಯದವರೆಗೆ ಜನ ಸಂಕಲ್ಪ ಯಾತ್ರೆ ಮುಂದುವರೆಸುವುದು.

ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪ್ರಣಾಳಿಕೆ ಸಿದ್ಧ ಪಡಿಸುವುದು. ರಾಷ್ಟ್ರೀಯ ನಾಯಕರ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಚರ್ಚಿಸಲಾಗಿದೆ ಎಂದರು. 

Share this Story:

Follow Webdunia kannada

ಮುಂದಿನ ಸುದ್ದಿ

ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ವಿದ್ಯುಕ್ತ ಚಾಲನೆ