Publish Date: Tue, 04 Sep 2018 (14:14 IST)
Updated Date: Tue, 04 Sep 2018 (14:31 IST)
ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಿಂದ ಬಡವರ ಬಂಧು ಯೋಜನೆಯನ್ನು ಜಾರಿಗೆ ತರಲು ಭರ್ಜರಿ ಸಿದ್ಧತೆ ನಡೆಸಿದ್ದೇವೆ ಎಂದು ಸಚಿವ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರದಿಂದ ಬಡವರ ಬಂಧು ಯೋಜನೆಯನ್ನು ಜಾರಿಗೆ ತರಲು ಸಿದ್ಧತೆ ನಡೆದಿದೆ ಎಂದು ಸಚಿವ ಬಂಡೆಪ್ಪ ಕಾಂಶಪೂರ ಹೇಳಿಕೆ ನೀಡಿದ್ದಾರೆ.
ಈಗಾಗಲೇ ಯೋಜನೆಗೆ ರೂಪುರೇಷೆಗಳನ್ನು ರೂಪಿಸಲಾಗುತ್ತಿದೆ. ಬೀದಿ ಬದಿಯ ವ್ಯಾಪಾರ ಸಮಸ್ಯೆಗಳನ್ನು ತಿಳಿಯಲು ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಬಡವರಿಗೆ ಈ ಯೋಜನೆ ತುಂಬಾ ಅನುಕೂಲವಾಗುವಂತೆ ತಯಾರು ಮಾಡುತ್ತಿದ್ದೇವೆ ಎಂದಿದ್ದಾರೆ.
ಬಡವರ ಬಂಧು ಈ ಯೋಜನೆಯಲ್ಲಿ ಬೀದಿ ಬದಿಯ ವ್ಯಾಪಾರಿಗಳ ಒಂದು ದಿನಕ್ಕೆ ವ್ಯಾಪಾರಕ್ಕೆ ಬೇಕಾಗುವ ಹಣವನ್ನು ಬೆಳಿಗ್ಗೆ ನೀಡಿ ಮತ್ತೆ ರಾತ್ರಿ ವಾಪಸು ಪಡೆಲಾಗುತ್ತದೆ. ಇದರಿಂದ ಖಾಸಗಿಯವರ ನೀಡುವ ಅತಿ ಹೆಚ್ಚು ಬಡ್ಡಿ ಸಾಲಕ್ಕೆ ಕಡಿವಾಣ ಹಾಕುವ ಉದ್ದೇಶ ಸರ್ಕಾರಕ್ಕಿದೆ ಎಂದು ಸಚಿವ ಕಾಶೆಂಪೂರ ಹೇಳಿದ್ದಾರೆ.