Publish Date: Mon, 22 Aug 2022 (14:51 IST)
Updated Date: Mon, 22 Aug 2022 (12:53 IST)
ಬೆಳಗಾವಿ : ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್-ಬಿಜೆಪಿ ಮಧ್ಯೆ ಸಾವರ್ಕರ್ ವಿವಾದ ಜೋರಾಗಿದೆ.
ಈ ಮಧ್ಯೆ ಬೆಳಗಾವಿ, ವಿಜಯಪುರ ಜಿಲ್ಲೆಯಲ್ಲಿ ಗಣೇಶೋತ್ಸವದ ವೇಳೆ ಸಾವರ್ಕರ್ ಉತ್ಸವ ಆಚರಿಸಲು ಸಿದ್ಧತೆ ನಡೆದಿದೆ.
ಈ ಬಾರಿ ಗಣೇಶೋತ್ಸವವನ್ನು ಸಾವರ್ಕರ್ ಉತ್ಸವವಾಗಿ ಆಚರಿಸುತ್ತೇವೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ನಿನ್ನೆಯಷ್ಟೇ ಹೇಳಿದ್ದರು.
ಇದರ ಬೆನ್ನಲ್ಲೇ ಈ ಬಾರಿ ಬೆಳಗಾವಿಯ ಐತಿಹಾಸಿಕ ಸಾರ್ವಜನಿಕ ಗಣೇಶೋತ್ಸವ ವೇಳೆ ಬೆಳಗಾವಿ ನಗರದಲ್ಲಿ ಪ್ರತಿಷ್ಠಾಪಿಸಲಾಗುವ ಪ್ರತಿಯೊಂದು ಗಣೇಶ ಮಂಟಪಗಳಲ್ಲಿ ವಿನಾಯಕ ದಾಮೋದರ್ ಸಾವರ್ಕರ್ ಫೋಟೋ ಇರಿಸುತ್ತೇವೆ ಎಂದು ಸ್ಥಳೀಯ ಬಿಜೆಪಿ ಮುಖಂಡರು ತಿಳಿಸಿದ್ದಾರೆ.