Publish Date: Sat, 25 Nov 2017 (06:20 IST)
Updated Date: Sat, 25 Nov 2017 (06:44 IST)
ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಇಂದು ನಮನ-ಚಿಂತನಾ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಬಂಗಾರಪ್ಪ ಜಯಂತ್ಯೋತ್ಸವ ಅಂಗವಾಗಿ ಈ ಕಾರ್ಯಕ್ರಮ ಯೋಜಿಸಲಾಗಿದೆ. ಈ ಸಂದರ್ಭದಲ್ಲಿ ‘ಬಂಗಾರ’ ಪ್ರಶಸ್ತಿ ಪ್ರದಾನ ಕೂಡ ನಡೆಯಲಿದೆ. ಕಾರ್ಯಕ್ರಮವನ್ನು ಪ್ರಕಾಶ್ ಅಂಬೇಡ್ಕರ್ ಉದ್ಘಾಟಿಸಲಿದ್ದಾರೆ.
ಬಂಗಾರಪ್ಪ ಜಯಂತ್ಯೋತ್ಸವ ಅಂಗವಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ನಮನ-ಚಿಂತನಾ ಅಭಿನಂದನಾ ಕಾರ್ಯಕ್ರಮವನ್ನು ಡಾ.ಬಿ.ಆರ್. ಅಂಬೇಡ್ಕರ್ ಅವರ ಮರಿ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮೂರು ಮಂದಿ ಸಾಧಕರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
ರಂಗಭೂಮಿಯಲ್ಲಿನ ಸಾಧನೆಗಾಗಿ ಪ್ರಸನ್ನ ಅವರಿಗೆ ಪ್ರಶಸ್ತಿ, ಸಾಹಿತಿ ಚೆನ್ನವೀರ ಕಣವಿಗೆ ಸಾಹಿತ್ಯ ‘ಬಂಗಾರ’ ಪ್ರಶಸ್ತಿ, ಸುಕ್ರಿಬೊಮ್ಮೆಗೌಡರಿಗೆ ಜನಪದ ಬಂಗಾರ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.