Select Your Language

Notifications

webdunia
webdunia
webdunia
webdunia

ಮೈಸೂರು ಅರಮನೆಯ ಸೌಂದರ್ಯವನ್ನು ಕಣ್ತುಂಬಿಕೊಂಡ ರಾಷ್ಟ್ರಪತಿ ದ್ರೌಪದಿ ಮುರ್ಮು

President Draupathi Murmu, royal Pramodadevi Wodeyar, traditional food of Mysore

Sampriya

ಮೈಸೂರು , ಮಂಗಳವಾರ, 2 ಸೆಪ್ಟಂಬರ್ 2025 (15:04 IST)
Photo Credit X
ಮೈಸೂರು: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಮಂಗಳವಾರ ಬೆಳಿಗ್ಗೆ ಮೈಸೂರು ಅರಮನೆಗೆ ಆಗಮಿಸಿ, ವರ್ಣರಂಜಿತ ಸೌಂದರ್ಯವನ್ನು ಕಣ್ತುಂಬಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರ ಆಹ್ವಾನದ ಮೇರೆಗೆ ಮುರ್ಮು ಅವರು ಭೇಟಿ ನೀಡಿದರು. ಮೈಸೂರು ಅಂಬವಿಲಾಸ ಅರಮನೆಯಲ್ಲಿ ಬೆಳಗಿನ ಉಪಹಾರ ಸವಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಬಳಿಕ ಅರಮನೆಯ ಕೆಲವು ಮುಖ್ಯ ಭಾಗಗಳನ್ನು ವೀಕ್ಷಿಸಿದರು.

ಮೈಸೂರಿನ ಸಾಂಪ್ರದಾಯಿಕ ಭಕ್ಷ್ಯಗಳಾದ ಮೈಸೂರು ಮಸಾಲೆ ದೋಸೆ, ಇಡ್ಲಿ, ಸಾಂಬಾರ್, ಚಟ್ನಿ, ಶ್ಯಾವಿಗೆ ಉಪ್ಪಿಟ್ಟು ಸಬ್ಬಕ್ಕಿ ವಡೆ, ಮೈಸೂರು ಪಾಕ್, ಗೋಧಿ ಹಾಲ್ಬಾಯಿ ಮತ್ತು ಬಾದಾಮ್ ಹಲ್ವಾ ಜೊತೆಗೆ ರಾಗಿ ಮತ್ತು ಗೋಧಿ ಬಿಸ್ಕೆಟ್, ಚಹಾ ಮತ್ತು ಕಾಫಿಯನ್ನು ರಾಷ್ಟ್ರಪತಿಗಳ ಆಹಾರ ಆದ್ಯತೆಗಳಿಗೆ ಅನುಗುಣವಾಗಿ ತಯಾರಿಸಲಾಗಿತ್ತು. 

ರಾಷ್ಟ್ರಪತಿಗಳು ಮತ್ತು ಕರ್ನಾಟಕದ ರಾಜ್ಯಪಾಲರನ್ನು ನಮ್ಮ ನಿವಾಸದಲ್ಲಿ ಸ್ವಾಗತಿಸಿರುವುದು ನನಗೆ ಅಪಾರ ಸಂತೋಷ ಮತ್ತು ಹೆಮ್ಮೆಯುಂಟುಮಾಡಿದೆ. ನನ್ನ ಆಹ್ವಾನವನ್ನು ಸ್ವೀಕರಿಸಿ ಗೌರವಿಸಿದ್ದಕ್ಕಾಗಿ ನಾನು ಅವರಿಗೆ ಹೃತ್ಪೂರ್ವಕವಾಗಿ ಧನ್ಯವಾದ ಹೇಳುತ್ತೇನೆ  ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹೆಮ್ಮೆ ಮತ್ತು ಗೌರವದ ಕ್ಷಣಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ. ರಾಷ್ಟ್ರಪತಿಗಳ ಆತಿಥ್ಯ ವಹಿಸುವುದು ನನಗೆ ಅಪಾರ ಗೌರವ ಮತ್ತು ಸಂತೋಷದ ಕ್ಷಣವಾಗಿತ್ತು

Share this Story:

Follow Webdunia kannada

ಮುಂದಿನ ಸುದ್ದಿ

ಸೌಜನ್ಯ ಘಟನೆ ನಡೆದಾಗ ನಿಮ್ಮ ಸರ್ಕಾರವೇ ಇದ್ದಿದ್ದು: ಬಿವೈ ವಿಜಯೇಂದ್ರಗೆ ನೆಟ್ಟಿಗರ ತರಾಟೆ