Publish Date: Thu, 14 Apr 2022 (20:18 IST)
Updated Date: Thu, 14 Apr 2022 (20:20 IST)
ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ದೇಶದ ಜನರಿಗೆ
ಅಂಬೇಡ್ಕರ್ ಜಯಂತಿ ಶುಭಾಶಯಗಳನ್ನು ಕೋರಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್ ಮಾಡಿ, ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವಪೂರ್ವಕ ನಮನಗಳು. ಅವರು ಸಾಮಾಜಿಕ ನ್ಯಾಯದ ಪರವಾಗಿದ್ದ ಪ್ರಬಲ ವಕೀಲರಾಗಿದ್ದರು . ಸಂವಿಧಾನವನ್ನು ರಚಿಸುವ ಮೂಲಕ ಆಧುನಿಕ ಭಾರತಕ್ಕೆ ಅಡಿಗಲ್ಲು ಹಾಕಿದರು. ಇದಕ್ಕೆ ಬದ್ಧವಾಗಿ, ಎಲ್ಲರನ್ನು ಒಳಗೊಂಡ ಸಮಾಜ ನಿರ್ಮಾಣ ಮಾಡುವಲ್ಲಿ ನಮ್ಮ ಪಾತ್ರ ನಿರ್ವಹಿಸೋಣ ಎಂದು ಹೇಳಿದ್ದಾರೆ. ಹಾಗೇ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನಗಳು. ಭಾರತದ ಅಭಿವೃದ್ಧಿಗಾಗಿ ಅವರು ನೀಡಿದ ಕೊಡುಗೆಗಳೆಂದೂ ಸ್ಮರಣೀಯ. ಅಂಬೇಡ್ಕರ್ ಕನಸಿನ ಭಾರತ ನಿರ್ಮಾಣಮಾಡಲು ನಾವು ಬದ್ಧರಾಗಿದ್ದೇವೆ ಎಂಬುದನ್ನು ಈ ದಿನನಾನು ಪುನರುಚ್ಚರಿಸುತ್ತೇನೆ ಎಂದು ಹೇಳಿದ್ದಾರೆ