Publish Date: Sat, 05 Aug 2023 (14:20 IST)
Updated Date: Sat, 05 Aug 2023 (14:24 IST)
ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಮೈಸೂರಿಗೆ ಭೇಟಿ ನೀಡಲಿದ್ದು, ವಿಶೇಷ ವಿಮಾನದ ಮೂಲಕ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಅರಣ್ಯ ವ್ಯಾಪ್ತಿಯ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಲಿದ್ದು, ಆಸ್ಕರ್ ಪ್ರಶಸ್ತಿ ವಿಜೇತ ಕಾವಾಡಿಗ ದಂಪತಿ ಬೊಮ್ಮ, ಬೆಳ್ಳಿ ಜೊತೆ ಕಾವಾಡಿಗರು, ಮಾವುತರ ಜೊತೆ ಸಂವಾದ ನಡೆಸಲಿದ್ದಾರೆ. ನಂತರ 5:45ರ ಸುಮಾರಿಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಮುರ್ಮು ಮೈಸೂರು ಆಗಮನದ ವೇಳೆ ಮೈಸೂರು ಜಿಲ್ಲಾಡಳಿತ ರಾಷ್ಟ್ರಪತಿಗೆ ಸ್ವಾಗತ ಕೋರಲಿದೆ.