Select Your Language

Notifications

webdunia
webdunia
webdunia
webdunia

ಸರಣಿ ಸುಲಿಗೆ ಬಳಿಕ ಯುಗಾದಿ ಹಬ್ಬಕ್ಕೆ ಬೆಲೆ ಏರಿಕೆ ಹೋಳಿಗೆ: ಕುಮಾರಸ್ವಾಮಿ

Nandini Milk Prize Hike, Central minister HD Kumaraswamy, Karnataka Congress Government

Sampriya

ಬೆಂಗಳೂರು , ಶುಕ್ರವಾರ, 28 ಮಾರ್ಚ್ 2025 (17:50 IST)
ಬೆಂಗಳೂರು:  ಎರಡು ವರ್ಷಗಳ ಸರಣಿ ಸುಲಿಗೆ ಮಾಡಿ ಇದೀಗ ರಾಜ್ಯದ ಜನತೆಗೆ ಯುಗಾದಿ ಹಬ್ಬಕ್ಕೆ ಬೆಲೆ 'ಏರಿಕೆ ಹೋಳಿಗೆ ನೀಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ.

ಹಾಲಿನ ದರ ಏರಿಕೆ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಹೊರಹಾಕಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಎರಡು ವರ್ಷಗಳ ಸರಣಿ ಸುಲಿಗೆ!
ಯುಗಾದಿ ಹಬ್ಬಕ್ಕೆ ಬೆಲೆ 'ಏರಿಕೆ ಹೋಳಿಗೆ!!'

???? ಹಾಲು ಹಾಲಾಹಲ; 3ನೇ ಸಲ ದರ ಏರಿಕೆ!
2023 ಆಗಸ್ಟ್ ₹3

2024 ಜೂನ್ ₹2
2025 ಮಾರ್ಚ್, ಅಂದರೆ ಈಗ ₹4

???? ವಿದ್ಯುತ್ ಶಾಕ್!
ಈಗ ಎಲ್ಲರಿಗೂ ಪ್ರತೀ ಯೂನಿಟ್ಟಿಗೆ ₹36 ಪೈಸೆ ಬರೆ. ಮಹಾದೇವಪ್ಪನಿಗೂ ಶಾಕು! ಕಾಕಾ ಪಾಟೀಲಗೂ ಶಾಕು!!

ಒಂದು ಕೈಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುವ ದಶಾವತಾರಿ ರಾವಣರೂಪಿ ಸುಲಿಗೆ ಪ್ರವೃತ್ತಿ ಕನ್ನಡಿಗರ ಪಾಲಿಗೆ ಮರಣಶಾಸನ. ಹಾಲು, ವಿದ್ಯುತ್ ದರ ಏರಿಕೆ ಖಂಡನೀಯ. ನೆಪ ರೈತರದು, ಲಾಭ ಕೆಎಂಎಫ್ ಗೆ! ಕಂಪನಿ ಆಡಳಿತ ನಡೆಸುತ್ತಿದೆ ಸರಕಾರ!

ಮೊಸರು ದರ ₹4 ಏರಿಕೆ ಮಾಡಿದ್ದೀರಿ. ಈ ಹಣ ಏನು ಮಾಡುತ್ತೀರಿ? ರೈತರಿಗೆ ವರ್ಗಾಯಿಸುತ್ತೀರೋ ಅಥವಾ ಕೆಎಂಎಫ್ ತಾನೇ ಉಳಿಸಿಕೊಳ್ಳಲಿದೆಯೋ? ಸ್ಪಷ್ಟಪಡಿಸಿ.

???? ಇದು ಪ್ರಜಾಪ್ರಭುತ್ವ ಸರಕಾರವಲ್ಲ.
ದರ ಏರಿಕೆ, ತೆರಿಗೆ ಹೇರಿಕೆ ಸರಕಾರ!
???? ಇದು ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ! ಸುಲಿಗೆಯಷ್ಟೇ ನಿತ್ಯಕೃತ್ಯ.

ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ.

ಈಸ್ಟ್ ಇಂಡಿಯಾ ಕಾಂಗ್ರೆಸ್!!

Share this Story:

Follow Webdunia kannada

ಮುಂದಿನ ಸುದ್ದಿ

ಪಕ್ಷವನ್ನು ಬಲಪಡಿಸಲು ಕಾಂಗ್ರೆಸ್ ಹೊಸ ತಂತ್ರ ರೂಪಿಸಿದೆ: ಡಿಕೆ ಶಿವಕುಮಾರ್‌