Webdunia - Bharat's app for daily news and videos

Install App

ಬೆಲೆ ಏರಿಕೆಯೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ : ಬೊಮ್ಮಾಯಿ

Webdunia
ಬುಧವಾರ, 2 ಆಗಸ್ಟ್ 2023 (06:44 IST)
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದು ಕಾಂಗ್ರೆಸ್ ಸರ್ಕಾರದ ದುಬಾರಿ ದುನಿಯಾ, 6ನೇ ಗ್ಯಾರಂಟಿ. ಈ ಸರ್ಕಾರಕ್ಕೆ ಜನ ಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಟ್ಚೀಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ, ಟೊಮೆಟೋ ಸಮೇತ ಎಲ್ಲ ತರಕಾರಿ ಬೆಲೆ ಏರಿಕೆ, ನಂದಿನಿ ಹಾಲು, ಮೊಸರು, ಮಜ್ಜಿಗೆ ಬೆಲೆ ಏರಿಕೆ, ಹೊಟೆಲ್ಗಳಲ್ಲಿ ತಿಂಡಿಗಳ ಬೆಲೆ ಏರಿಕೆ, ಬಜೆಟ್ನಲ್ಲಿ ಅಬಕಾರಿ ತೆರಿಗೆ ಹೆಚ್ಚಳ, ಮೋಟಾರ್ ವೆಹಿಕಲ್ ತೆರಿಗೆ ಹೆಚ್ಚಳ, ಸ್ಟ್ಯಾಂಪ್ ಡ್ಯೂಟಿ ಹೆಚ್ಚಳ ಮೂಲಕ ಬರುವಂತ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗಲಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದುನಿಯಾ ದುಬಾರಿಯಾಗಿದ್ದು ಜನತೆ ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.ರಾಜ್ಯ ಸರ್ಕಾರ ಅವೈಜ್ಞಾನಿಕವಾಗಿ ಗ್ಯಾರಂಟಿ ಯೋಜನೆಗಳನ್ನ ಜಾರಿಗೊಳಿಸಲು ರಾಜ್ಯದ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದ್ದು, ರಾಜ್ಯದ ಅಭಿವೃದ್ಧಿಯ ಹಾದಿಯೇ ಅಯೋಮಯವಾಗಲಿದೆ ಎಂದಿದ್ದಾರೆ. 

ಎಸ್ಸಿಪಿ ಟಿಎಸ್ಪಿ ಕಾಯ್ದೆಯಡಿ ಎಸ್ಸಿ-ಎಸ್ಟಿ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನದಲ್ಲಿ ಸುಮಾರು 11 ಸಾವಿರ ಕೋಟಿ ರೂ.ಗಳನ್ನ ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡುತ್ತಿದ್ದು, ಎಸ್ಸಿ-ಎಸ್ಟಿ ಸಮುದಾಯದ ಅಭಿವೃದ್ಧಿಗೆ ಮಾರಕವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲ್ಲು ಅರ್ಜುನ್ ರೀತಿ ಸಿದ್ದರಾಮಯ್ಯ, ಡಿಕೆಶಿಯನ್ನು ಅರೆಸ್ಟ್ ಮಾಡಬೇಕು: ಬಸನಗೌಡ ಯತ್ನಾಳ್

Chinnaswamy stampede : ಪಹಲ್ಗಾಮ್ ದಾಳಿಗೆ ಕೇಂದ್ರದ ಮೇಲೆ ಗೂಬೆ ಕೂರಿಸಿದ್ರಿ ಈಗೇನಂತೀರಿ

Chinnaswamy stampede: ಇದೊಂದು ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡವಲ್ಲವೇ: ಸಿ.ಟಿ.ರವಿ

Chinnaswamy stampede: ಮಾಧ್ಯಮದ ಮುಂದೆ ಪಾಪ ಮಕ್ಕಳು ಎಂದು ಗಳ ಗಳನೆ ಅತ್ತ ಡಿಕೆ ಶಿವಕುಮಾರ್

RCB: ಆರ್ ಸಿಬಿ ಆಟಗಾರರಿಗೆ ಸನ್ಮಾನಕ್ಕಿಂತ ಅಧಿಕಾರಿಗಳು, ಸಚಿವರ ಮಕ್ಕಳಿಗೆ ಸೆಲ್ಫೀ ತೆಗೆಯುವುದೇ ಹೆಚ್ಚಾಯ್ತು

ಮುಂದಿನ ಸುದ್ದಿ
Show comments