Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿನ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಪ್ರಧಾನಿ ಮೆಚ್ಚುಗೆ

Prime Minister appreciates the implementation of development programs in the state
bangalore , ಮಂಗಳವಾರ, 21 ಜೂನ್ 2022 (20:07 IST)
ರಾಜ್ಯದಲ್ಲಿ ನಡೆಯುತ್ತಿರುವ ದೊಡ್ಡ ಪ್ರಮಾಣದ ಅಭಿವೃದ್ಧಿ, ಜನಪರ ಕಾರ್ಯಕ್ರಮಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದ ಯೋಜನೆಗಳ ಅನುಷ್ಠಾನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ.
 
ಅವರು ಇಂದು ತಮ್ಮ ಆರ್.ಟಿ.ನಗರ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ತೋರಿಸಿದ್ದಾರೆ.
 
ಪ್ರಧಾನಿ ನರೇಂದ್ರ ಮೋದಿಯವರು ಸುಶಾಸನ ಮತ್ತು ಅಭಿವೃದ್ಧಿ ಪರ ಆಡಳಿತ ಮೆಚ್ಚಿಕೊಳ್ಳುವವರು. ಪ್ರಧಾನಿಯವರ ಮೆಚ್ಚುಗೆ ನನ್ನಲ್ಲಿ ಇನ್ನಷ್ಟು ಶಕ್ತಿ ತುಂಬಿದೆ. ಈ ಮೆಚ್ಚುಗೆ ಸರ್ಕಾರಕ್ಕೆ ಹೆಚ್ಚಿನ ದಕ್ಷತೆ ಹಾಗೂ ಬದ್ಧತೆಯಿಂದ ಕೆಲಸ ಮಾಡಲು ಪುಷ್ಟಿ ನೀಡಿದೆ.
 
ಪಂಚಮಸಾಲಿ ಸಮುದಾಯ ಸ್ವಾಮೀಜಿಗಳ ಜೊತೆ ಮಾತುಕತೆ ನಡೆಸಲಾಗುವುದೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಸಮುದಾಯದವರು, ಸಚಿವ ಸಿ.ಸಿ.ಪಾಟೀಲ್ ಮತ್ತು ಸ್ವಾಮೀಜಿ ಅವರೊಂದಿಗೆ ನಾಳೆ ಸಭೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಪೀಣ್ಯ ಕೈಗಾರಿಕಾ ಪ್ರದೇಶದ ಮೂಲ ಸೌಕರ್ಯಗಳ ಅಭಿವೃದ್ಧಿಯ 100 ಕೋಟಿ ರೂ. ಯೋಜನೆಗೆ ಅನುಮೋದನೆ