Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿ ಚೋರ್ ಎಂದು ಪುನರುಚ್ಛಸಿದ ಖರ್ಗೆ

ಪ್ರಧಾನಿ ಮೋದಿ ಚೋರ್ ಎಂದು ಪುನರುಚ್ಛಸಿದ ಖರ್ಗೆ
ಕಲಬುರಗಿ , ಶುಕ್ರವಾರ, 28 ಸೆಪ್ಟಂಬರ್ 2018 (16:33 IST)
ಪ್ರಧಾನಿ ಮೋದಿ  ಒಬ್ಬ ಚೋರ್ ಎಂಬ ಹೇಳಿಕೆಯನ್ನು ಕಾಂಗ್ರೆಸ್ ನಾಯಕ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.

ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಸ್ವತಃ ಪ್ರಾನ್ಸ್ ಮಾಜಿ ರಾಷ್ಟ್ರಪತಿಗಳೇ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮಾತ್ರ ಬಾಯಿ ಬಿಚ್ಚುತ್ತಿಲ್ಲ. ಕೇವಲ ವಕ್ತಾರರ ಮೂಲಕ ಸ್ಪಷ್ಟೀಕರಣ ನೀಡುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಪ್ರಧಾನಿ ಪಾರದರ್ಶಕವಾಗಿದ್ದರೆ, ಪ್ರಾಮಾಣಿಕವಾಗಿದ್ದರೆ, ಯಾವ ರೀತಿಯ ಡೀಲ್ ನಡೆದಿದೆ ಎಂಬುದನ್ನು ದೇಶದ ಜನತೆಯ ಮುಂದೆ ಇಡಬೇಕು. ಅದನ್ನು ಬಿಟ್ಟು ಬಾಯಿ ಮುಚ್ಚಿ ಕುಳಿತುಕೊಂಡರೆ ಏನರ್ಥ? ಸ್ವತಃ ಪ್ರಧಾನಿಗಳೇ ಮುತವರ್ಜಿ ವಹಿಸಿ ರಫೆಲ್ ಡೀಲ್  ಮಾಡಿಸಿರುವ ಹಿನ್ನೆಲೆಯಲ್ಲಿ ಚೋರ್ ಎಂಬ ಪದ ಬಳಕೆ ಮಾಡಲಾಗಿದೆ ಎಂದರು. ತಾವು ಪ್ರಾಮಾಣಿಕರಾಗಿದ್ದರೆ ಈ ಕುರಿತು ಜಂಟಿ ಸದನ ಸಮಿತಿ ರಚಿಸಿ ತನಿಖೆಗೆ ಒಳಪಡಿಸಬೇಕು ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ಶಬರಿಮಲೆಗೆ ಮಹಿಳೆಯರ ಪ್ರವೇಶ ನಿರಾಕರಣೆಗೆ ಪೌರಾಣಿಕ ಕಾರಣವೇನು ಗೊತ್ತಾ?