Select Your Language

Notifications

webdunia
webdunia
webdunia
webdunia

ರಾಜ್ಯ ಸರ್ಕಾರ ಅಳವಡಿಸಿರುವ ‘5ಟಿ’ ಸೂತ್ರಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

ರಾಜ್ಯ ಸರ್ಕಾರ ಅಳವಡಿಸಿರುವ ‘5ಟಿ’ ಸೂತ್ರಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
bangalore , ಶುಕ್ರವಾರ, 14 ಜನವರಿ 2022 (16:46 IST)
ಕೋವಿಡ್ ನಿರ್ವಹಣೆಗೆ ರಾಜ್ಯ ಸರ್ಕಾರ ಅಳವಡಿಸಿಕೊಂಡಿರುವ '5ಟಿ' ಸೂತ್ರವನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಕೋವಿಡ್ ನಿರ್ವಹಣೆಗೆ ಪರೀಕ್ಷೆ, ಟ್ರಾಕಿಂಗ್, ಟ್ರೇಸಿಂಗ್, ಟ್ರ್ಯಾಜಿಂಗ್ ಮತ್ತು ಟೆಕ್ನಾಲಜಿ ಬಳಕೆಯ ಸೂತ್ರವನ್ನು ರಾಜ್ಯ ಅಳವಡಿಸಿಕೊಂಡಿದ್ದು, ನಿನ್ನೆ ನಡೆದ ಸಭೆಯಲ್ಲಿ ಈ ಸೂತ್ರಕ್ಕೆ ಮೆಚ್ಚುಗೆ ಸಿಕ್ಕಿದೆ ಎಂದು ಸಿಎಂ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆ ಬಗ್ಗೆ ಮಾತನಾಡಿದರು. ಈ ವೇಳೆ ನಮ್ಮ ರಾಜ್ಯದಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಲಾಗಿದೆ. ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪರೀಕ್ಷೆ ನಡೆಸುತ್ತಿರುವ ಕುರಿತು ಹಾಗೂ ರಾಜ್ಯದಲ್ಲಿ ಲಸಿಕೆ ಹಾಕಿಸಿಕೊಂಡವರ ಪ್ರಮಾಣ ದೇಶದ ಸರಾಸರಿಗಿಂತ ಹೆಚ್ಚಿರುವ ಕುರಿತು ಪ್ರಧಾನಿ ಮೋದಿ ಸಂತಸ ಹೆಚ್ಚಿಸಿದ್ದಾರೆ.
ಆಕ್ಸಿಜನ್ ಬೆಡ್‌ಗಳು ಮತ್ತು ಆಕ್ಸಿಜನ್ ಪ್ಲಾಂಟ್‌ಗಳನ್ನು ಹೆಚ್ಚಿಸಲು ಕೇಂದ್ರದ ನೆರವು ಕೋರಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಕರ ಸಂಕ್ರಾಂತಿ ವಿಶೇಷ: ಪವಿತ್ರ ಗಂಗಾ ಸ್ನಾನಕ್ಕೆ ಬಂದ 3 ಲಕ್ಷ ಯಾತ್ರಾರ್ಥಿಗಳಿಗೆ ಕೋವಿಡ್‌