Select Your Language

Notifications

webdunia
webdunia
webdunia
webdunia

ಪ್ರಧಾನಿ‌ ಮೋದಿಗೆ ಸಿದ್ದರಾಮಯ್ಯ ಪ್ರಶ್ನೇಗಳ ಸುರಿಮಳೆ

Prime Minister Modi is showered with questions by Siddaramaiah
bangalore , ಭಾನುವಾರ, 30 ಏಪ್ರಿಲ್ 2023 (19:30 IST)
ಮಾನ್ಯ ನರೇಂದ್ರ ಮೋದಿ ಅವರೇ ನೀವು ನೂರು ‘‘ಮನ್ ಕಿ ಬಾತ್” ಕಾರ್ಯಕ್ರಮವನ್ನು ಮುಗಿಸಿದ್ದಕ್ಕೆ ಅಭಿನಂದನೆಗಳು. ಈಗಲಾದರೂ  ‘‘ಜನ್ ಕಿ ಬಾತ್” ಕೇಳುತ್ತಿರಾ ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಪ್ರಧಾನಿ‌ ಮೋದಿಗೆ ಪ್ರಶ್ನೇ ಮಾಡಿದ್ದಾರೆ. ಈ ಬಗ್ಗೆ ಪತ್ರಿಕಾ‌ ಹೇಳಿಕೆ ಬಿಡುಗಡೆ ಮಾಡಿರುವ ಅವರು ಅಂತಾರಾಷ್ಟ್ರೀಯ  ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್ ಗೆ 125 ಡಾಲರ್ ಇದ್ದಾಗ ದೇಶದಲ್ಲಿ ಪೆಟ್ರೋಲ್ ಬೆಲೆ ರೂ. 57 ಇತ್ತು, ಈಗ ಕಚ್ಚಾ ತೈಲದ ಬೆಲೆ ಬ್ಯಾರಲ್ ಗೆ 54.77 ಡಾಲರ್ ಇರುವಾಗ ಪೆಟ್ರೋಲ್ ಬೆಲೆ ರೂ. 102 ರೂಪಾಯಿ ಆಗಿರುವುದು ಯಾಕೆ..? 'ನಾ ಖಾವುಂಗಾ, ನಾ ಖಾನೆದೂಂಗಾ' ಎಂದು ನೀವು ಹೇಳಿದಿರಿ,ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ನಿಮಗೆ ಪತ್ರ ಬರೆದಿದ್ದರೂ ಅದಕ್ಕೆ ಉತ್ತರಿಸುವ ಧೈರ್ಯ ತೋರಿಲ್ಲ ಯಾಕೆ? ರೈತರ ಸಾಲ ಮನ್ನಾ ಮಾಡಲು ನಿರಾಕರಿಸುತ್ತಿರುವ ನಿಮ್ಮ ಸರ್ಕಾರ  ಉದ್ಯಮಿಗಳ ಸಾಲ ಮನ್ನಾ ಮಾಡುತ್ತಿರುವುದೇಕೆ..? 
ಪ್ರಧಾನಿ ಅವರೇ ನೀವು ರೋಡ್ ಶೋ ನಡೆಸಿರುವ ಬೆಂಗಳೂರು ರಸ್ತೆಗಳಲ್ಲಿರುವ 25,000 ಗುಂಡಿಗಳನ್ನು ಮುಚ್ಚಲು  ರೂ.7,200 ಕೋಟಿ, ಅಂದರೆ ಒಂದು ಗುಂಡಿಗೆ ತಲಾ ರೂ.9.20 ಲಕ್ಷ ಖರ್ಚು ಮಾಡಿದರೂ ಗುಂಡಿಗಳು ಹಾಗೆಯೇ ಉಳಿದುಕೊಂಡಿರುವುದು ಯಾಕೆ ಎಂದು ಪ್ರಧಾನಿ ಮೋದಿ ಅವರಿಗೆ ಸಾಲು ಸಾಲು ಪ್ರಶ್ನೆಗಳನ್ನ ಕೇಳಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗೋವಿಂದರಾಜನಗರ ಹಾಗೂ ವಿಜಯನಗರ ಕ್ಷೇತ್ರದಲ್ಲಿ ಭರ್ಜರಿ ರೋಡ್ ಶೋ