Select Your Language

Notifications

webdunia
webdunia
webdunia
webdunia

ಜನವರಿ 12ಕ್ಕೆ ಹುಬ್ಬಳ್ಳಿಗೆ ಪ್ರಧಾನಿ ಮೋದಿ ಆಗಮನ - ಸಿಎಂ ಬೊಮ್ಮಾಯಿ

webdunia
bangalore , ಸೋಮವಾರ, 9 ಜನವರಿ 2023 (20:09 IST)
ಪ್ರಧಾನಿ ನರೇಂದ್ರ ಮೋದಿ, ಇದೇ ತಿಂಗಳ 12 ರಂದು ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಂದು ಪ್ರಧಾನಿ ಮೋದಿಯವರು ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗಲಿದ್ದಾರೆ. ಏಳು ದಿನ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳು ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಪಾಲ್ಗೊಳ್ಳುತ್ತಿದ್ದಾರೆ ಎಂದು ತಿಳಿಸಿದರು. ಜನವರಿ 19ಕ್ಕೆ ನಾರಾಯಣಪುರಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, ಕೇಂದ್ರ ಹಾಗೂ ರಾಜ್ಯ ಅನುದಾನಿತ ನಾರಾಯಣಪುರ ಎಡದಂಡೆ ಕಾಲುವೆ  ಆಧುನೀಕರಣದ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಗುಲ್ಬರ್ಗಾದ ಬಂಜಾರ ಸಮಾವೇಶ ನಡೆಸುವ ಯೋಜನೆಯಿದ್ದು, ಪ್ರಧಾನಿ ಮೋದಿಯವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಇನ್ನೂ ನಿಶ್ಚಯವಾಗಿಲ್ಲ ಎಂದು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಡಾ. ಅಂಬೇಡ್ಕರ್ ರಸ್ತೆಯ ಕಾಫಿ ಬೋರ್ಡ್ ಆವರಣದಲ್ಲಿರುವ ನೂತನವಾಗಿ ನವೀಕರಣೆ