Publish Date: Fri, 21 Apr 2023 (16:21 IST)
Updated Date: Fri, 21 Apr 2023 (16:23 IST)
ಪ್ರಧಾನಿ ನರೇಂದ್ರ ಮೋದಿಯವರು ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿರುವುದಕ್ಕೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಇವತ್ತು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿದ್ರು. ಮೋದಿಯವರ ಕರೆ ಅಂದಾಗ ನನಗೆ ಆಶ್ಚರ್ಯವಾಯ್ತು. ನನಗೆ ಟಿಕೆಟ್ ಸಿಗದಿದ್ದಕ್ಕೆ ಪ್ರಧಾನಿ ಮೋದಿ ಧೈರ್ಯ ಹೇಳಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.. ಇದು ಭಾರತೀಯ ಜನತಾ ಪಾರ್ಟಿಯ ಸಂಸ್ಕಾರ. ಸಾಮಾನ್ಯ ಕಾರ್ಯಕರ್ತನನ್ನು ಪಕ್ಷ ಮರೆಯಲ್ಲ ಎಂದಿದ್ದಾರೆ.. ಹಿರಿಯರ ಸೂಚನೆ ಪ್ರಕಾರ ನಿವೃತ್ತಿ ಪತ್ರ ಬರೆದಿದ್ದೆ. ಈ ಹಿನ್ನೆಲೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪಕ್ಷ ಬಿಡುವಾಗ ಅವರಿಗೆ ಪತ್ರ ಬರೆದಿದ್ದೆ. ನನ್ನ ನಿರ್ಧಾರ ನನಗೆ ವಿಶೇಷ ಅನಿಸಿಲ್ಲ. ಟಿಕೆಟ್ ಸಿಗೋದಿಲ್ಲ ಅಂತ ಬೇಸರ ಮಾಡುವುದು ಸರಿಯಲ್ಲ ಎಂದಿದ್ದಾರೆ