ಕಾವೇರಿ ವಿವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಕಾಂಗ್ರೆಸ್ ಕಾರ್ಪೋರೇಟರ್‌ಗಳು ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಯಶವಂತಪುರ ವಾರ್ಡ್ ಸದಸ್ಯ ಜಿ.ಕೆ.ವೆಂಕಟೇಶ್, ಲಕ್ಷ್ಮಿದೇವಿ ನಗರ ವಾರ್ಡ್’ನ ಎಂ.ವೇಲು ನಾಯಕರ್, ಕೊಟ್ಟಿಗೆಪಾಳ್ಯ ವಾರ್ಡ್’ನ ಜಿ.ಮೋಹನ್ ಕುಮಾರ್ ಹಾಗೂ ಜಾಲಹಳ್ಳಿ ವಾರ್ಡ್ ಶ್ರೀನಿವಾಸ ಮೂರ್ತಿ ನಾಳೆ ರಾಜೀನಾಮೆ ನೀಡಲಿದ್ದಾರೆ.
ರಾಜೀನಾಮೆ ನೀಡಲಿರುವ ಕಾಂಗ್ರೆಸ್ ಕಾರ್ಪೊರೇಟರ್ಗಳು ನಾಳೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ಗೆ ರಾಜೀನಾಮೆ ಸಲ್ಲಿಸಲಿದ್ದಾರೆ.
ಸುಪ್ರೀಂಕೋರ್ಟ್ ಆದೇಶದಂತೆ ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ ನೀರು ಹರಿದುಬಿಡುವಂತೆ ಆದೇಶ ನೀಡಿರುವುದು ಕಾವೇರಿ ಕಣಿವೆಯ ಜನತೆಗೆ ಮರಣಶಾಸನವಾಗಿದೆ ಎಂದು ರಾಜ್ಯದ ಜನತೆ ಕಿಡಿಕಾರಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ