Publish Date: Fri, 28 Oct 2022 (08:46 IST)
Updated Date: Fri, 28 Oct 2022 (08:41 IST)
ಬೆಂಗಳೂರು : ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಭೇಟಿ ನೀಡಲಿದ್ದು,
ದಕ್ಷಿಣ ಭಾರತದಲ್ಲಿ ಮೊದಲ ಹಾಗೂ ಭಾರತದ ಐದನೇ ವಂದೇ ಭಾರತ ಎಕ್ಸ್ಪ್ರೆಸ್ಗೆ ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಗಾಂಧಿಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ನವೆಂಬರ್ 11 ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ನ ಉದ್ಘಾಟನೆಯನ್ನು ಮಾಡಲಿದ್ದಾರೆ. ಅದೇ ಆವರಣದಲ್ಲಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ.