Select Your Language

Notifications

webdunia
webdunia
webdunia
webdunia

ಬೆಂಗಳೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ; ಹೇಗಿದೆ ಗೊತ್ತಾ ಬಿಗಿ ಬಂದೋಬಸ್ತ್!

ಪ್ರಧಾನಿ
ಬೆಂಗಳೂರು: ಬೆಂಗಳೂರಿನಲ್ಲಿಂದು ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ  ಸಮಾರೋಪದ ರ್ಯಾಲಿ ನಡೆಯಲಿದೆ. ಮಧ್ಯಾಹ್ನ 3.55ಕ್ಕೆ ಹೆಲಿಕಾಪ್ಟರ್ ಮೂಲಕ ಹೆಬ್ಬಾಳ ಏರ್ ಫೋರ್ಸ್ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ ಮೋದಿ. ಸಂಜೆ 4ಕ್ಕೆ ಅರಮನೆ ಮೈದಾನದ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಅರಮನೆ ಮೈದಾನದಲ್ಲಿ ದಕ್ಷಿಣಾಭಿಮುಖ ವೇದಿಕೆಯಲ್ಲಿ ಭಾಷಣ ಮಾಡಲಿದ್ದಾರೆ. ಸಂಜೆ 5.35ಕ್ಕೆ ಎಚ್.ಎ.ಎಲ್ ಏರ್ ಪೋರ್ಟ್ ನಿಂದ ದೆಹಲಿಗೆ ಮರಳಿ ಪ್ರಯಾಣಿಸಲಿದ್ದಾರೆ.


ಇನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ.11 ಡಿಸಿಪಿ, 33 ಎಸಿಪಿ, ಮೂರು ಸಾವಿರ ಪೊಲೀಸರು, 50 ಕೆ.ಎಸ್.ಆರ್.ಪಿ, 20 ಸಿಎಆರ್ ತುಕಡಿಗಳ ನಿಯೋಜನೆ ಮಾಡಲಾಗಿದೆ. ಸಂಚಾರ ನಿಯಂತ್ರಣಕ್ಕೆ 2 ಡಿಸಿಪಿ, 3 ಎಸಿಸಿ, 1200 ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರತಿಭಟನಾಕಾರರು ಸಮಾವೇಶದತ್ತ ಸುಳಿಯದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಮಾಧ್ಯಮಕ್ಕೆ ಪೊಲೀಸ್ ಆಯುಕ್ತ ಟಿ. ಸುನಿಲ್ ಕುಮಾರ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ವಿರುದ್ದ ಹರಿಹಾಯ್ದ ಮಾಜಿ ಸಚಿವ ಹೆಚ್.ವಿಶ್ವನಾಥ್