Select Your Language

Notifications

webdunia
webdunia
webdunia
webdunia

ಪ್ರಧಾನಿ ನರೇಂದ್ರ ಮೋದಿ ಇಂದು ಮೈಸೂರಿಗೆ ಆಗಮನ

ಪ್ರಧಾನಿ ನರೇಂದ್ರ ಮೋದಿ ಇಂದು ಮೈಸೂರಿಗೆ ಆಗಮನ
ಮೈಸೂರು , ಭಾನುವಾರ, 18 ಫೆಬ್ರವರಿ 2018 (07:27 IST)
ಮೈಸೂರು : ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಭಾನುವಾರ(ಇಂದು) ರಾತ್ರಿ ಮೈಸೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ಅವರು ಸಂಚರಿಸುವ ಮಾರ್ಗದಲ್ಲಿ ಬಿಗಿ ಬಂದೋಬಸ್ತ್‌ ಕೈಗೊಂಡಿದ್ದಾರೆ.


ಭಾನುವಾರ ರಾತ್ರಿ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ರ‍್ಯಾಡಿಸನ್‌ ಬ್ಲೂ ಹೊಟೇಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸೋಮವಾರ ಬೆಳಗ್ಗೆ ಹೊಟೇಲ್‌ನಲ್ಲಿಯೇ ವಿಡಿಯೋ ಕಾನ್ಫರೆನ್ಸ್‌ ನಡೆಸಿ ನಂತರ ಹೆಲಿಪ್ಯಾಡ್‌ ಮೂಲಕ ಅಲ್ಲಿಂದ ಶ್ರವಣ ಬೆಳಗೊಳಕ್ಕೆ ತೆರಳಿದ್ದಾರೆ. ಬಳಿಕ  ಮೈಸೂರಿಗೆ ವಾಪಾಸಾಗಿ ನಂತರ ರೈಲ್ವೆ ನಿಲ್ದಾಣಕ್ಕೆ ತೆರಳಿ ಬೆಂಗಳೂರು-ಮೈಸೂರು ರೈಲುಮಾರ್ಗದ ಪೂರ್ಣಗೊಂಡಿರುವ ವಿದ್ಯುದೀಕರಣ ಕಾಮಗಾರಿಯ ಲೋಕಾರ್ಪಣೆ ಹಾಗೂ ಮೈಸೂರು- ಉದಯ್‌ಪುರ ರೈಲು ಮಾರ್ಗದ ಪ್ಯಾಲೇಸ್‌ ಕ್ವೀನ್‌ ಹಮ್ಸಫರ್‌ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡಲಿದ್ದಾರೆ. ನಂತರ ಮಹಾರಾಜ ಕಾಲೇಜು ಮೈದಾನಕ್ಕೆ ಆಗಮಿಸಿ, ಬಿಜೆಪಿಯ ಸಮಾವೇಶಕ್ಕೆದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶದ ಬಳಿಕ ದೆಹಲಿಗೆ ಹಿಂದಿರುಗಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಾಷ್ಟ್ರೀಯ ಪಕ್ಷಗಳ ವಿರುದ್ಧ ಕಿಡಿಕಾರಿದ ಹೆಚ್.ಡಿ.ದೇವೇಗೌಡ