Select Your Language

Notifications

webdunia
webdunia
webdunia
webdunia

ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ಬೆಂಗಳೂರು , ಮಂಗಳವಾರ, 13 ನವೆಂಬರ್ 2018 (07:30 IST)
ಬೆಂಗಳೂರು : ಕೇಂದ್ರ ಸಚಿವ ಅನಂತಕುಮಾರ್ ಸೋಮವಾರ ಬೆಳಗಿನ ಜಾವ ವಿಧಿವಶರಾದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿ ಪಕ್ಷದ ಹಿರಿಯ ನಾಯಕನ ಅಂತಿಮ ದರ್ಶನವನ್ನು ಪಡೆದುಕೊಂಡಿದ್ದಾರೆ.


ವಾರಣಾಸಿಯಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ಅಗಲಿದ ನಾಯಕನಿಗೆ ಹೂಗುಚ್ಛ ಅರ್ಪಿಸಿ ಕೊನೆಯ ನಮನ ಸಲ್ಲಿಸಿ, ಅನಂತಕುಮಾರ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಈ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜ್ಯಪಾಲ ವಜೂಬಾಯಿ ವಾಲಾ ಉಪಸ್ಥಿತರಿದ್ದರು.


ಈಗಾಗಲೇ ಅನಂತ್ ಕುಮಾರ‍್ ಅವರ ಅಂತ್ಯಸಂಸ್ಕಾರಕ್ಕೆ ಬೇಕಾಗಿರುವ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಮಂಗಳವಾರ ಬೆಳಗ್ಗೆ 8 ಗಂಟೆಗೆ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಹಾಗೂ 10 ಗಂಟೆಗೆ ಬಸವನಗುಡಿಯ ನ್ಯಾಷನಲ್ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಮಧ್ಯಾಹ್ನ 1 ಗಂಟೆ ಸುಮಾರಿಗೆ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ವೈದಿಕ ಸಂಪ್ರದಾಯದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಇಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಆಗಮಿಸಲಿದ್ದು, ಅನಂತ್ ಕುಮಾರ‍್ ಅವರ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಚಿಕಿತ್ಸೆಯ ಕೊಡಿಸುವುದಾಗಿ ಬಾಲಕಿಯನ್ನು ಕರೆದೊಯ್ದ ವೈದ್ಯ ಮಾಡಿದ್ದೇನು ಗೊತ್ತಾ?